ಯಾದಗಿರಿ: ವ್ಯಸನಮುಕ್ತ ಸಮಾಜಕ್ಕೆ ಶ್ರಮಿಸಿದ ಡಾ.ಮಹಾಂತ ಶಿವಯೋಗಿಯವರು ತೋರಿದ ದಾರಿಯಲ್ಲಿ ಪ್ರತಿಯೊಬ್ಬರೂ ಸಾಗಿದರೆ ಆರೋಗ್ಯಕ ಸಮಾಜದ ನಿಮರ್ಾಣ ಸಾಧ್ಯ ಎಂದು ಜಿಲ್ಲಾಕಾರಿ ಡಾ.ಸುಶೀಲಾ ಬಿ., ತಿಳಿಸಿದರು.
ನಗರದ ಜಿಲ್ಲಾಕಾರಿ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ಡಾ.ಮಹಾಂತ ಶಿವಯೋಗಿಗಳ ಜನ್ಮದಿನ ನಿಮಿತ್ತ ಆಯೋಜಿಸಿದ್ದ ವ್ಯಸನ ಮುಕ್ತ ದಿನ ಕಾರ್ಯಕ್ರಮದಲ್ಲಿ ಮಾತನಾಡಿ,ದುಶ್ಚಟಗಳನ್ನು ಬಿಡುವುದರಿಂದ ದೈಹಿಕ ಆರೋಗ್ಯ ಸುಧಾರಣೆಯಾಗುತ್ತದೆ. ಜತೆಗೆ ಆಥರ್ಿಕವಾಗಿ ಸದೃಢರಾಗಲೂ ಸಾಧ್ಯವಿದೆ. ದುಶ್ಚಟಗಳಿಗೆ ದಾಸರಾಗಿ ನಿತ್ಯ ಕಣ್ಣೀರಿಡುವ ಕುಟುಂಬಗಳಿಗೆ ಶಾಶ್ವತ ನೆಮ್ಮದಿ ಕಲ್ಪಿಸಿದ ಶ್ರೇಯಸ್ಸು ಮಹಾಂತ ಯೋಗಿಗಳಿಗೆ ಸಲ್ಲುತ್ತದೆ. ಹಾಗಾಗಿ ಇವರ ಜನ್ಮದಿನವನ್ನು ಸಕರ್ಾರಿಂದಲೇ ಆಚರಣೆ ಮಾಡಲಾಗುತ್ತಿದೆ ಎಂದು ಹೇಳಿದರು.
ಶಿವಯೋಗಿಯವರು ತಮ್ಮ ಇಡೀ ಜೀವತದ ಅವಯನ್ನು ಸಮಾಜ ಸೇವೆಗೆ ಮುಡಿಪಾಗಿಟ್ಟವರು. ಯುವ ಜನತೆಗೆ ದುಶ್ಚಟಗಳಿಂದಾಗುವ ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಜತೆಗೆ ಮಾನಸಿಕ ನೆಮ್ಮದಿ ನೀಡುವ ಆರೋಗ್ಯಕರ ಚಿಂತನೆಗಳನ್ನು ಜನರ ಮನಸ್ಸಿನಲ್ಲಿ ಬಿತ್ತುವ ಮೂಲಕ ಉತ್ತಮ ಜೀವನ ನಡೆಸಲು ಅನೇಕರಿಗೆ ಪ್ರೇರಣೆಯಾಗಿದ್ದಾರೆ ಎಂದರು.
ಇಂದಿನ ಯುವ ಪೀಳಿಗೆ ಇಂಥ ಮಹಾತ್ಮರ ಜೀವನ ಚರಿತ್ರೆಯನ್ನು ಅಧ್ಯಯನ ಮಾಡಬೇಕು. ಸ್ವಾವಲಂಬನೆಯಿಂದ ಜೀವನ ಸಾಗಿಸುವ ಮೂಲಕ ಇತರರಿಗೆ ಮಾದರಿಯಾಗಬೇಕು ಎಂದು ಕಿವಿಮಾತು ಹೇಳಿದರು.ಅಪರ ಜಿಲ್ಲಾಕಾರಿ ಶರಣಬಸಪ್ಪ ಕೋಟೆಪ್ಪಗೊಳ ಹಾಗೂ ಕಚೇರಿಯ ಸಿಬ್ಬಂದಿ ಇದ್ದರು.