ಜಿಲ್ಲೆ

ದುಷ್ಪರಿಣಾಮದ ಅರಿವು ತಂಬಾಕು ಮೂಡಿಸಿ

ಬಳ್ಳಾರಿ : ತಂಬಾಕು ಉತ್ಪನ್ನಗಳ ಬಳಕೆಯಿಂದಾಗುವ ದುಷ್ಪರಿಣಾಮ ಕುರಿತು ಸಾರ್ವಜನಿಕ ವಲಯದಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದು ಮೊಹಮ್ಮದ್ ಝುಬೇರ್ ಹೇಳಿದರು.
ನಗರದ ಹೊಸ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಅಂಗಡಿ, ಹೋಟಲ್, ಬೇಕರಿ, ಲಾಡ್ಜ್, ಬಾರ್ ಮತ್ತು ರೆಸ್ಟೋರೆಂಟ್ ಹಾಗೂ ಇತರೆ ವಾಣಿಜ್ಯ ಮಳಿಗೆಗಳಲ್ಲಿ ಕಡ್ಡಾಯವಾಗಿ ಕೋಟ್ಪಾ ಕಾಯ್ದೆಗೆ ಸಂಬಂಧಿಸಿದ ನಾಮಫಲಕಗಳನ್ನು ಹಾಕಬೇಕು. ಈ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ಕ್ರಮ ವಹಿಸಬೇಕು. ನಾಮಫಲಕ ಹಾಕದ ಅಂಗಡಿಗಳಿಗೆ ನೋಟಿಸ್ ಜಾರಿ ಮಾಡಬೇಕು ಎಂದರು.
ಜಿಲ್ಲೆಯ ಒಟ್ಟು 1308 ಶಾಲೆಗಳಲ್ಲಿ 1267 ಶಾಲೆಗಳನ್ನು ತಂಬಾಕು ಮುಕ್ತ ಶಾಲೆಗಳನ್ನಾಗಿ ಘೋಷಣೆ ಮಾಡಲಾಗಿದ್ದು, ಬಾಕಿ ಉಳಿದ 41 ಶಾಲೆಗಳನ್ನು ತಂಬಾಕು ಮುಕ್ತ ಶಾಲೆಗಳಾಗಿ ಘೋಷಿಸಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸಭೆಗೆ ತಿಳಿಸಿದರು. ಜಿಲ್ಲೆಯಲ್ಲಿ ಆಹಾರ ಮಾರಾಟಕ್ಕೆ ಸಂಬಂಧಿಸಿದಂತೆ 2093 ಪರವಾನಿಗೆ ಪಡೆದ ಅಂಗಡಿ, ಬೇಕರಿ, ಹೋಟೆಲ್ಗಳಿದ್ದು, ಅವುಗಳಲ್ಲಿ 1407 ನಾಮಫಲಕ ಅಳವಡಿಸಲಾಗಿದೆ ಹಾಗೂ ಬಾಕಿ ಉಳಿದ 686 ಸ್ಥಳಗಳಲ್ಲಿ ನಾಮಫಲಕ ಅಳವಡಿಸಲಾಗುವುದು ಎಂದು ಆಹಾರ ಇಲಾಖೆಯ ಅಧಿಕಾರಿಗಳು ಸಭೆಗೆ ತಿಳಿಸಿದರು.
ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಬಳಕೆ ಹೆಚ್ಚಾಗಿ ಕಂಡುಬರುತ್ತಿದ್ದು, ಕಡಿವಾಣ ಹಾಕಬೇಕು ಕೆಕೆಆರ್‌ಟಿಸಿ ನಿಗಮದ ಅಧಿಕಾರಿಗಳಿಗೆ ಎಡಿಸಿ ನಿರ್ದೇಶಿಸಿದರು