ಚಾಮರಾಜನಗರ: ಸ್ಟಾಫ್ ಸೆಲಕ್ಷನ್ ಕಮಿಷನ್ ವತಿಯಿಂದ ಕಾನ್ಸ್‌ಟೇಬಲ್ (ಚಾಲಕ- ಪುರುಷ), ದೆಹಲಿ ಪೊಲೀಸ್ ಹುದ್ದೆಯ ನೇಮಕಾತಿ ಪರೀಕ್ಷೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಮಾನ್ಯತೆ ಪಡೆದ ಮಂಡಳಿಯಿಂದ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. ದಿನಾಂಕ 1-07-2022ಕ್ಕೆ ಅನ್ವಯವಾಗುವಂತೆ ಅಭ್ಯರ್ಥಿಯು 21 ರಿಂದ 30 ವರ್ಷಗಳ ವಯೋಮಿತಿಯಲ್ಲಿರಬೇಕು. ನಿರ್ದಿಷ್ಟ ವರ್ಗಗಳಿಗೆ ವಯೋಮಿತಿಯಲ್ಲಿ ಸಡಿಲಿಕೆಯಿದ್ದು, ವಿವರಗಳು ಆಯೋಗದ ವೆಬ್‌ಸೈಟ್‌ನಲ್ಲಿ ಲಭ್ಯವಿರುತ್ತದೆ. ಅರ್ಜಿ ಶುಲ್ಕ 100 ರೂ. ಗಳಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಇತರೆ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಲ್ಲಿ ವಿನಾಯಿತಿ ಇದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 29 ಕಡೆಯದಿನವಾಗಿದೆ.
ಸಂಪೂರ್ಣ ವಿವರ, ಸೂಚನೆಗಳು ಹಾಗೂ ಅರ್ಜಿ ಸಲ್ಲಿಕೆಗೆ ವೆಬ್‌ಸೈಟ್ https://ssc.nic.in ನೋಡಬಹುದು. ಅಲ್ಲದೇ ಹೆಚ್ಚಿನ ಮಾಹಿತಿಗಾಗಿ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಜಿಲ್ಲಾ ಉದ್ಯೋಗ ಅಧಿಕಾರಿಯವರನ್ನು ಸಂಪರ್ಕಿಸಬಹುದು. ದೂ.ಸಂ 08226-224430 ಸಂಪರ್ಕಿಸಿ ಕೂಡ ವಿವರ ಪಡೆಯಬಹುದೆಂದು ಜಿಲ್ಲಾ ಉದ್ಯೋಗಾಧಿಕಾರಿ ಎ. ಮಹಮ್ಮದ್ ಅಕ್ಬರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.