ಮೂಡಲಗಿ ತಾಲೂಕಿನ ಅರಬಾವಿಯಲ್ಲಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆಯನ್ನು ಶಾಸಕ ಬಾಲಚಂದ್ರ ಜಾರಕಿಹೊಳಿ ಉದ್ಘಾಟಿಸಿದರು. ಡಾ.ರಾಜೇಂದ್ರ ಸಣ್ಣಕ್ಕಿ, ಶಂಕರ ಬಿಲಕುಂದಿ, ವಿಠ್ಠಲ ಸವದತ್ತಿ, ಇತರರು ಇದ್ದರು. 
ಜಿಲ್ಲೆ

ದೆಹಲಿವರೆಗೆ ಮೂಡಲಗಿ ಶೈಕ್ಷಣಿಕ ವಲಯ ಹವಾ!

ರಾಘವೇಂದ್ರಗೌಡ ಭೀ ಪಾಟೀಲ್

ಮೂಡಲಗಿ: ಮೂಡಲಗಿ ವಲಯದ ಶೈಕ್ಷಣಿಕ ಸುಧಾರಣೆ ಕಾರ್ಯಕ್ರಮಗಳು ದೆಹಲಿ ಮಟ್ಟದಲ್ಲಿ ಚರ್ಚೆ ನಡೆಯುತ್ತಿರುವುದು ಉತ್ತಮ ನಿದರ್ಶನ. ಇದಕ್ಕೆ ಶಿಕ್ಷಕ ಸಮುದಾಯದ ಶ್ರಮವೇ ಕಾರಣ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಮೆಚ್ಚುಗೆ ವ್ಯಕ್ತಪಡಿಸಿದರು.

ತಾಲೂಕಿನ ವಡೇರಹಟ್ಟಿಯ ಸರ್ಕಾರಿ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯ/ಅರಬಾವಿ ಬಸವೇಶ್ವರ ಸಭಾಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಡಾ. ಸರ್ವೆಪಲ್ಲಿ ರಾಧಾಕಷ್ಣನ್ ಜನ್ಮ ದಿನಾಚರಣೆ ಹಾಗೂ ತಾಲೂಕುಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನನ್ನ ಅಧಿಕಾರಅವಧಿಯಲ್ಲಿ ಶಿಕ್ಷಣಕ್ಕೆ ಮೊದಲ ಪ್ರಾಶಸ್ತ್ಯ ನೀಡಿದ್ದೇನೆ. ಶಿಕ್ಷಣದಿಂದ ಮಾತ್ರ ಸಮಾಜದಲ್ಲಿ ಪರಿವರ್ತನೆ ಸಾಧ್ಯವಿದೆ. ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳ ಮಧ್ಯ ಪೈಪೋಟಿ ನಡುವೆಯೂ ಮೂಡಲಗಿ ಶೈಕ್ಷಣಿಕ ವಲಯ ಸರ್ಕಾರಿ ಹಾಗೂ ವಸತಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ನೀಡುತ್ತಿದೆ ಎಂದರು.

ಮೂಡಲಗಿ ವಲಯ ಧಾರವಾಡ ವಿಭಾಗದಲ್ಲಿ ಸರ್ಕಾರಿ ಶಾಲೆಗಳಲ್ಲಿನ ಹಾಜರಾತಿಯಲ್ಲಿ 3ನೇ ಸ್ಥಾನ ಪಡೆದಿದೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 22 ವರ್ಷಗಳಿಂದ ಸತತವಾಗಿ ಜಿಲ್ಲೆಗೆ ಪ್ರಥಮ ಸ್ಥಾನ ಹಾಗೂ ರಾಜ್ಯಕ್ಕೆ 3 ಬಾರಿ ಪ್ರಥಮ ಸ್ಥಾನ ಗಳಿಸಿ ಕೀರ್ತಿ ತಂದಿರುವುದು ಹೆಮ್ಮೆಯ ವಿಷಯ ಎಂದರು.

ಖಾನಟ್ಟಿ, ಬೆಟಗೇರಿ, ಕುಲಗೋಡ, ಮೂಡಲಗಿ ಹೊಸ ಪಿಯು ಕಾಲೇಜುಗಳ ಮಂಜೂರಾಗಿದ್ದು, ಆರ್ಥಿಕ ಇಲಾಖೆಯಿಂದ ಹುದ್ದೆಗಳ ಅನುಮೋದನೆ ಸಿಗಬೇಕಿದೆ ಎಂದರು. ನಿವೃತ್ತ ಶಿಕ್ಷಕರು ಹಾಗೂ ಸಾಧಕರನ್ನು ಸನ್ಮಾನಿಸಲಾಯಿತು.

ಸುಣಧೋಳಿಯ ಶಿವಾನಂದ ಶ್ರೀಗಳು, ಜಿಪಂ ಮಾಜಿ ಸದಸ್ಯರಾದ ಡಾ.ರಾಜೇಂದ್ರ ಸಣ್ಣಕ್ಕಿ, ಶಂಕರ ಬಿಲಕುಂದಿ, ವಿಠ್ಠಲ ಸವದತ್ತಿ, ಪರಮೇಶ್ವರ ಹೊಸಮನಿ, ಎಪಿಎಂಸಿ ಮಾಜಿ ಅಧ್ಯಕ್ಷ ಎ.ಟಿ. ಗಿರಡ್ಡಿ, ಮಾಜಿ ಉಪಾಧ್ಯಕ್ಷ ಎಂ.ಎಂ. ಪಾಟೀಲ, ಬಸವರಾಜ ಭೂತಾಳಿ, ಪರಸಪ್ಪ ಬಬಲಿ, ತಾಪಂ ಇಒ ಎ್.ಜಿ. ಚಿನ್ನನ್ನವರ, ಸಿಡಿಪಿಇ ವೈ.ಕೆ. ಗದಾಡಿ, ತಾಲೂಕು ಸಮಾಜ ಕಲ್ಯಾಣಾಧಿಕಾರಿ ಎ.ಬಿ. ಮಲಬನ್ನವರ, ಸಿಪಿಐ ಶ್ರೀಶೈಲ ಬ್ಯಾಕೋಡ, ವಡೇರಹಟ್ಟಿ ಗ್ರಾಪಂ ಅಧ್ಯಕ್ಷೆ ಅಕ್ಕವ್ವ ಮಳ್ಳಿವಡೇರ, ಉಪಾಧ್ಯಕ್ಷೆ ಲಕ್ಕವ್ವ ಸಾರಾಪುರ, ವಡೇರಹಟ್ಟಿ ಸಂ.ಪ.ಪೂ ಕಾಲೇಜಿನ ಪ್ರಾಚಾರ್ಯ ಎಸ್.ಐ. ಭಾಗೋಜಿ ಇತರರಿದ್ದರು. ಬಿಇಒ ಅಜಿತ ಮನ್ನಿಕೇರಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು.