ಮಾನ್ವಿ ತಹಸಿಲ್ ಕಚೇರಿ ಆವರಣದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಅಂಗವಾಗಿ ಸರ್ದಾರ್ ವಲಭಭಾಯಿ ಪಟೇಲರ ಭಾವಚಿತ್ರಕ್ಕೆ ಶಾಸಕ ಹಂಪಯ್ಯನಾಯಕ ಪೂಜೆ ಸಲ್ಲಿಸಿದರು. ತಹಸೀಲ್ದಾರ್ ರಾಜು ಪಿರಂಗಿ, ಪುರಸಭೆ ಮುಖ್ಯಾಧಿಕಾರಿ ಗಂಗಾಧರ, ಸ್ಥಾಯಿ ಸಮಿತಿ ಅಧ್ಯಕ್ಷ ವೆಂಕಟೇಶನಾಯಕ, ಹಿರಿಯ ಸದಸ್ಯ ರಾಜಾ ಮಹೇಂದ್ರನಾಯಕ, ಬಿಇಒ ಡಿ. ಚಂದ್ರಶೇಖರ ಇತರರಿದ್ದರು. 
ಜಿಲ್ಲೆ

ದೇಶ ಭಕ್ತಿ ಬೆಳೆಸಿಕೊಳ್ಳಲು ಸಲಹೆ

ಮಾನ್ವಿ: ಪಟ್ಟಣದ ತಹಸಿಲ್ ಕಚೇರಿ ಆವರಣದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಅಂಗವಾಗಿ ಸರ್ದಾರ್ ವಲ್ಲಭಭಾಯಿ ಪಟೇಲ್ ಭಾವಚಿತ್ರಕ್ಕೆ ಶಾಸಕ ಹಂಪಯ್ಯನಾಯಕ ಪೂಜೆ ಸಲ್ಲಿಸಿ ಮಾತನಾಡಿದರು.

ದೇಶಕ್ಕೆ ಸ್ವಾತಂತ್ರೃ ಬಂದು ಒಂದು ವರ್ಷದ ಬಳಿಕ ಈ ಭಾಗದ ಜನರಿಗೆ ಹೈದ್ರಾಬಾದ್ ನಿಜಾಮರಿಂದ ಸ್ವಾತಂತ್ರ್ಯ ದೊರೆತಿದೆ. ಕಲ್ಯಾಣ ಕರ್ನಾಟಕದ ವಿಮೋಚನೆಗಾಗಿ ಹೋರಾಡಿದ ಮಹನೀಯರಿಗೆ ಗೌರವ ಸಲ್ಲಿಸುವ ಸಲುವಾಗಿ ಕಲ್ಯಾಣ ಕರ್ನಾಟಕ ಉತ್ಸವ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.

ರಾಷ್ಟ್ರಧ್ವಜಾರೋಹಣ ನೆರವೇರಿಸಿದ ತಹಸೀಲ್ದಾರ್ ರಾಜು ಪಿರಂಗಿ, ಪ್ರತಿಯೊಬ್ಬರು ದೇಶ ಭಕ್ತಿ ಬೆಳೆಸಿಕೊಳ್ಳುವ ಮೂಲಕ ಕಲ್ಯಾಣ ಕರ್ನಾಟಕವನ್ನು ಅಭಿವೃದ್ಧಿಯತ್ತ ಕೊಂಡೊಯ್ಯೋಣ ಎಂದರು.

ಕಾರ್ಯಕ್ರಮದಲ್ಲಿ ಪುರಸಭೆ ಮುಖ್ಯಾಧಿಕಾರಿ ಗಂಗಾಧರ, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ವೆಂಕಟೇಶನಾಯಕ, ಹಿರಿಯ ಸದಸ್ಯ ರಾಜಾ ಮಹೇಂದ್ರನಾಯಕ, ಬಿಇಒ ಡಿ. ಚಂದ್ರಶೇಖರ, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಸಲಿಂ ಪಾಷಾ, ಹಿರಿಯ ನ್ಯಾಯವಾದಿ ಗುಮ್ಮ ಬಸವರಾಜ, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.