ಮಾದನಾಯಕನಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಶಿಬಿರದಲ್ಲಿ ಶಾಸಕ ಡಿ.ಸಿ.ತಮ್ಮಣ್ಣ ಮಾತನಾಡಿದರು. ಮಾದನಾಯಕನಹಳ್ಳಿ ರಾಜಣ್ಣ, ಅಪೂರ್ವಚಂದ್ರು, ಶಂಕರೇಗೌಡ, ಕೆಂಗಲ್‌ಗೌಡ, ಲಿಂಗೇಗೌಡ ಇದ್ದರು.  
ಜಿಲ್ಲೆ

ದೇಶದ ಅಭಿವೃದ್ಧಿಯತ್ತ ಗಮನಹರಿಸಿ

ಮದ್ದೂರು: ಗ್ರಾಮಗಳ ಅಭಿವೃದ್ಧಿಯಿಂದ ದೇಶದ ಅಭಿವೃದ್ಧಿ ಎಂಬುದನ್ನು ವಿದ್ಯಾರ್ಥಿಗಳು ಮನಗಾಣಬೇಕು ಎಂದು ಶಾಸಕ ಡಿ.ಸಿ.ತಮ್ಮಣ್ಣ ಹೇಳಿದರು.

ಪಟ್ಟಣದ ಎಚ್.ಕೆ. ವೀರಣ್ಣಗೌಡ ಪದವಿ ಕಾಲೇಜು ವತಿಯಿಂದ ತಾಲೂಕಿನ ಮಾದನಾಯಕನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಆಯೋಜಿಸಿದ್ದ ರಾಷ್ಟ್ರೀಯ ಸೇವಾ ಯೋಜನೆಯ 2022-2023 ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿ ಗಳು ಪರಿಶ್ರಮದಿಂದ ವ್ಯಾಸಂಗ ಮಾಡಿ ಸಮಾಜದಲ್ಲಿ ಉತ್ತಮ ಹುದ್ದೆ ಅಲಂಕರಿಸಬಹುದು ಎಂದರು.

ಸಂಸ್ಥೆ ಕಾರ್ಯದರ್ಶಿ ಅಪೂರ್ವಚಂದ್ರು ಮಾತನಾಡಿ, ಶಿಬಿರಗಳು ವಿದ್ಯಾರ್ಥಿಗಳಿಗೆ ಶಿಸ್ತು ಮತ್ತು ಶ್ರದ್ಧೆ ಕಲಿಸುತ್ತದೆ ಎಂದರು.

ಪ್ರಾಂಶುಪಾಲ ಶಂಕರೇಗೌಡ ಮಾತನಾಡಿದರು. ಭೂಮಿಕ ಗ್ರೂಪ್ಸ್ ಮಾಲೀಕ ಮಾದನಾಯಕನಹಳ್ಳಿ ರಾಜಣ್ಣ ಪ್ರತಿಜ್ಞಾವಿಧಿ ಭೋದಿಸಿದರು. ಮುಖಂಡರಾದ ಕೆಂಗಲ್‌ಗೌಡ, ಲಿಂಗೇಗೌಡ ಇತರರಿದ್ದರು.