ಚಿಕ್ಕಮಗಳೂರು: ಭಾರತದ ಜನತೆಗೆ ಸ್ವಾತಂತ್ರö್ಯ ದಿನಾಚರಣೆ ಎಂದರೆ ರಾಷ್ಟಿçÃಯ ಹಬ್ಬದ ಗೌರವ, ಅಭಿಮಾನ. ಭಾರತೀಯರಾದ ನಾವು, ನಮ್ಮ ದೇಶದ ಬಗ್ಗೆ ಹೆಮ್ಮೆ ಪಡಲು ಮತ್ತು ದೇಶದ ಸುರಕ್ಷಿತ ಭವಿಷ್ಯವನ್ನು ರೂಪಿಸುವ ಸಂಕಲ್ಪಕ್ಕೆ ಸದಾವಕಾಶ ಸಿಕ್ಕಿದೆ ಎಂದು ಭಾವಿಸಬೇಕು ಎಂದು ರಾಜ್ಯ ಇಂಧನ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು.
ನಗರದ ನೇತಾಜಿ ಸುಭಾಷ್‌ಚಂದ್ರ ಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಲಾಗಿದ್ದ ೭೯ನೇ ಸ್ವಾತಂತ್ರÈ ದಿನಾಚರಣೆಯಲ್ಲಿ ರಾಷ್ಟç ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಸ್ವಾತಂತ್ರö್ಯ ಹೋರಾಟದ ಆ ಕಾಲಘಟ್ಟದಲ್ಲಿ ಇಂದಿನAತೆ ಯಾವುದೇ ರೀತಿಯ ತಂತ್ರಜ್ಞಾನ, ಸಾರಿಗೆ ವ್ಯವಸ್ಥೆ ಹಾಗೂ ಇನ್ನಿತರ ಮೂಲ ಸೌಲಭ್ಯಗಳಾದ ಶಿಕ್ಷಣ, ಆರೋಗ್ಯ, ಸಂವಹನ, ಸಾಮಾಜಿಕ ಜಾಲತಾಣಗಳು ಇರಲಿಲ್ಲ. ಅಂಥ ಸಂದರ್ಭದಲ್ಲಿ ಬ್ರಿಟೀಷರಿಂದ ನಮ್ಮ ದೇಶವನ್ನು ಸ್ವಾತಂತ್ರö್ಯಗೊಳಿಸುವುದಕ್ಕೆ ಜನರನ್ನು ಸಂಘಟಿಸುವುದು, ಮಾಹಿತಿ ರವಾನಿಸುವುದು, ಚಳವಳಿಗೆ ಕರೆ ನೀಡುವುದು ಮುಂತಾದ ಸ್ವಾತಂತ್ರö್ಯ ಹೋರಾಟದ ಪೂರಕ ಕೆಲಸಗಳನ್ನು ನಮ್ಮ ದೇಶದ ಹಿರಿಯರು ಮಾಡಿದರು. ಇಂತಹ ಅಭೂತ ಪೂರ್ವ ಕಾರ್ಯದ ನಾಯಕತ್ವ ವಹಿಸಿದವರು ನಮ್ಮ ಹೆಮ್ಮೆಯ ರಾಷ್ಟçಪಿತ ಮಹಾತ್ಮ ಗಾಂಧೀಜಿ ಎಂದರು.
ನಮ್ಮ ಈ ಸ್ವಾತಂತ್ರö್ಯದ ಉಸಿರಿಗಾಗಿ ಹಲವು ರೀತಿಯ ಹೋರಾಟದ ಯಜ್ಞದಲ್ಲಿ ತಮ್ಮನ್ನು ತಾವೇ ಸಮರ್ಪಿಸಿಕೊಂಡ ಮಹನೀಯರಾದ ಮಹಾತ್ಮ ಗಾಂಧೀಜಿ, ಗೋಪಾಲ ಕೃಷ್ಣ ಗೋಖಲೆ, ಲಾಲ ಲಜಪತ್ ರಾಯ್, ಭಗತ್ ಸಿಂಗ್, ಅರವಿಂದ ಘೋಷ್, ಬಾಲಗಂಗಾಧರ ತಿಲಕ್, ಬಿಪಿನ್ ಚಂದ್ರಪಾಲ್, ಪಂಡಿತ್ ಜವಹರಲಾಲ್ ನೆಹರು, ಸರ್ದಾರ್ ವಲ್ಲಭಬಾಯಿ ಪಟೇಲ್, ಡಾ.ಬಿ.ಆರ್.ಅಂಬೇಡ್ಕರ್, ಡಾ.ಮೌಲಾನಾ ಅಬ್ದುಲ್ ಕಲಾಂ ಆಜಾದ್, ಸುಭಾಷ್ ಚಂದ್ರ ಬೋಸ್, ಅನಿಬೆಸೆಂಟ್ ಇಂತಹ ಹಲವು ಮಹನೀಯರ ಜೊತೆಗೆ ಕರ್ನಾಟಕದ ಮಹನೀಯರಾದ ಟಿ.ಸುಬ್ರಹ್ಮಣ್ಯಂ, ಕಾರ್ನಾಡ್ ಸದಾಶಿವರಾವ್, ಶ್ರೀನಿವಾಸರಾವ್ ಕೌಜಲಗಿ, ನಿಟ್ಟೂರು ಶ್ರೀನಿವಾಸ್ ರಾವ್ ಮೊದಲಾದವರ ತ್ಯಾಗ ಬಲಿದಾನಗಳ ಆದರ್ಶವೂ ಇದೆ ಎಂದು ಹೇಳಿದರು.
ಚಿಕ್ಕಮಗಳೂರು ಜಿಲ್ಲೆಯಲ್ಲೂ ಸಹ ಹಲವಾರು ಸ್ವಾತಂತ್ರ ಹೋರಾಟಗಳು ನಡೆದವು. ಅವುಗಳಲ್ಲಿ ಸಾಮಾಜಿಕ ಅಸಮಾನತೆಯ ವಿರುದ್ಧ ಹೋರಾಟ, ವಿದೇಶಿ ವಸ್ತç ಹಾಗೂ ವಸ್ತುಗಳ ಬಹಿಷ್ಕಾರ, ಸ್ವದೇಶಿ ವಸ್ತುಗಳ ಬಳಕೆಗೆ ಪ್ರೋತ್ಸಾಹ, ಚರಕದಿಂದ ನೂಲು ತೆಗೆಯುವುದು, ಖಾದಿ ವಸ್ತç ಬಳಕೆ ಮಾಡುವುದು, ಕಾನೂನು ಭಂಗ ಚಳವಳಿ ಇಂತಹ ಅನೇಕ ಹೋರಾಟಗಳು ಮೂಡಿ ಬಂದವು ಎಂದರು.
ಭಾರತ ಸ್ವಾತಂತ್ರö್ಯ ಅಭಿಯಾನದಲ್ಲಿ ಕಾಂಗ್ರೆಸ್‌ನ ಒಟ್ಟಾರೆ ಸಾಧನೆ ಅತ್ಯಂತ ಮಹತ್ವದ್ದು. ಅದೇ ರೀತಿಯಲ್ಲಿ ಭಾರತೀಯರಿಗೆ ಒಳ್ಳೆಯ ಆಡಳಿತದ ಸುಭದ್ರತೆಯನ್ನು ನೀಡಬೇಕೆಂಬುದು ನಮ್ಮ ಕಾಂಗ್ರೆಸ್ ಪಕ್ಷದ ದೃಢ ಸಂಕಲ್ಪವಾಗಿದೆ. ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಅಳುಕಿಲ್ಲದೆ ನಿರ್ಭಯವಾಗಿ ಅತ್ಯಂತ ಸಮರ್ಪಕವಾಗಿ ಜಾರಿಗೆ ತಂದಿರುವುದು ಇಡೀ ದೇಶದಲ್ಲಿಯೇ ಮಾದರಿಯಾಗಿದೆ ಎಂದರು.
ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಮನೆ ಮನೆ ಪೊಲೀಸ್ ಆರಕ್ಷಕ ಗೆಳತಿ ಮತ್ತು ಮಾದಕ ವಸ್ತು ಮೂರು ವಿನೂತನ ವಿರೋಧಿ ಕಾರ್ಯಕ್ರಮಗಳನ್ನು ಪ್ರಾರಂಭಿಸಲಾಗಿದ್ದು, ಆರಕ್ಷಕ ಗೆಳತಿ ಕಾರ್ಯಕ್ರಮದಡಿ ಬಾಲಕಿಯರ ಹಾಸ್ಟೆಲ್‌ಗಳಲ್ಲಿರುವ ವಿದ್ಯಾರ್ಥಿನಿಯರಿಗೆ ಕಾನೂನಿನ ಅರಿವು ಮೂಡಿಸಲು ಹಾಗೂ ಅವರ ಕುಂದುಕೊರತೆಗಳನ್ನು ವಿಚಾರಿಸಿ ಪರಿಹರಿಸುವ ಉz್ದೆÃಶವನ್ನು ಹೊಂದಲಾಗಿದೆ ಎಂದು ಹೇಳಿದರು.
ಜಿಲ್ಲೆಯ ಕಡೂರು ತಾಲೂಕು ವ್ಯಾಪ್ತಿಯಲ್ಲಿ ೨೫ ಕೆರೆಗಳಿಗೆ ನೀರು ಪೂರೈಸುವ ಮದಗದ ಕೆರೆ ಮತ್ತು ಕಾಲುವೆಗಳ ಆಧುನೀಕರಣ ಕಾಮಗಾರಿಯನ್ನು ೫೦ ಕೋಟಿ ರೂ. ವೆಚ್ಚದಲ್ಲಿ ಸಣ್ಣ ನೀರಾವರಿಯಿಂದ ಮಾಡಲಾಗುವುದು. ಈ ಯೋಜನೆಯ ಮುಂದುವರಿದ ಭಾಗವಾಗಿ ಅಜ್ಜಂಪುರ ತಾಲೂಕು ಗಡಿರಂಗಾಪುರ ಮತ್ತು ಇತರೆ ೧೯ ಕೆರೆಗಳಿಗೆ ನೀರು ತುಂಬಿಸುವ ಏತ ನೀರಾವರಿ ಯೋಜನೆಯ ಕಾಮಗಾರಿಯನ್ನು ೪೮ ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದರು.
ಭದ್ರಾ ಉಪ ಕಣಿವೆ ಯೋಜನೆಯಡಿ ಕಡೂರು ಮತ್ತು ಚಿಕ್ಕಮಗಳೂರು ತಾಲೂಕುಗಳ ಕೆರೆಗಳಿಗೆ ನೀರು ತುಂಬಿಸಲು ೪೦೭ ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದ್ದು, ಟೆಂಡರ್ ಪ್ರಕ್ರಿಯೆ ಜಾರಿಯಲ್ಲಿದೆ. ಜಿಲ್ಲೆಯ ರಾಜ್ಯ ಹೆದ್ದಾರಿ, ಜಿಲ್ಲಾ ಮುಖ್ಯ ರಸ್ತೆಯ ಅಭಿವೃದ್ಧಿಗಾಗಿ ಲೋಕೋಪಯೋಗಿ ಇಲಾಖೆಯ ಒಟ್ಟು ೮೯ ಕಾಮಗಾರಿಗಳಿಗೆ ೧೫೦ ಕೋಟಿ ರೂ.ಗಳಿಗೆ ಅನುಮೋದನೆ ನೀಡಲಾಗಿದೆ. ಎನ್.ಆರ್.ಪುರ ಪಟ್ಟಣದ ರಸ್ತೆ ಅಭಿವೃದ್ಧಿಗಾಗಿ ೬೦ ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.
ಶಾಸಕ ಎಚ್.ಡಿ. ತಮ್ಮಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ, ಭದ್ರಾ ಅಚ್ಚುಕಟ್ಟು ಪ್ರಾಧಿಕಾರದ ಅಧ್ಯಕ್ಷ ಡಾ. ಅಂಶುಮAತ್, ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ. ಶಿವಾನಂದಸ್ವಾಮಿ, ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಯಾಜ್ ಅಹಮದ್, ಜಿಲ್ಲಾಧಿಕಾರಿ ಮೀನಾ ನಾಗರಾಜ್, ಜಿಲ್ಲಾ ರಕ್ಷಣಾಧಿಕಾರಿ ಡಾ. ವಿಕ್ರಂ ಅಮಟೆ, ಜಿಪಂ ಸಿಇಒ ಎಚ್.ಎಸ್.ಕೀರ್ತನಾ ಮತ್ತಿತರರಿದ್ದರು.