ಜಿಲ್ಲೆ

ದೇಶದ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಕೆಲಸ

ಚಾಮರಾಜನಗರ: ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿ ಆವರಣದಲ್ಲಿ ಭಾನುವಾರ ಆಯೋಜಿಸಿದ್ದ 76ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ ಧ್ವಜಾರೋಹಣ ನೆರವೇರಿಸಿದರು.

ಮಹಾತ್ಮ ಗಾಂಧಿ, ಅಂಬೇಡ್ಕರ್ ಅವರ ಅಶಯದಂತೆ ದೇಶದ ಸಮಗ್ರ ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷ ದುಡಿಯುತ್ತಿದೆ. ರೈತರು, ಕೂಲಿ ಕಾರ್ಮಿಕರು ಮತ್ತು ದುಡಿಯುವ ವರ್ಗದವರಿಗೆ ವಿಶೇಷವಾದ ಕಾಯ್ದೆಗಳನ್ನು ನೀಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯಡಿಯಲ್ಲಿ ಎಲ್ಲರೂ ಸಮಾನವಾಗಿ ಬದುಕು ರೂಪಿಸಿಕೊಳ್ಳಬೇಕು ಎಂಬ ಉದ್ದೇಶದಿಂದ ಅಂಬೇಡ್ಕರ್ ಅವರು ಅನೇಕ ರಾಷ್ಟ್ರಗಳ ಸಂವಿಧಾನವನ್ನು ಅಧ್ಯಯನ ಮಾಡಿ, ಭಾರತಕ್ಕೆ ಒಪ್ಪುವಂತಹ ಸಂವಿಧಾನವನ್ನು ನೀಡಿದ್ದಾರೆ ಎಂದು ಬಣ್ಣಿಸಿದರು.

ನಗರರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಮದ್ ಅಸ್ಗರ್(ಮುನ್ನಾ), ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಚಿಕ್ಕ ಮಹದೇವ್, ಆರ್.ಮಹದೇವ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ.ಎಸ್.ಗುರುಸ್ವಾಮಿ, ಮಹಿಳಾ ಅಧ್ಯಕ್ಷೆ ಶಕುಂತಲಾ, ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾಧ್ಯಕ್ಷ ಸೋಮೇಶ್ವರ್, ನಗರಸಭಾ ಸದಸ್ಯ ಚಿನ್ನಮ್ಮ, ಸ್ವಾಮಿ ಕರಿನಂಜನಪುರ, ಶಾಂತಲಾ, ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ರಾಜು, ದೂರಕಿ ಉಪ್ಪಾರ್, ಪುಟ್ಟಸ್ವಾಮಿ ಇತರರು ಇದ್ದರು.