ವಿಜಯವಾಣಿ ಸುದ್ದಿಜಾಲ ಧಾರವಾಡ
ರಾಜ್ಯ ಸರ್ಕಾರ 2024ರ ಆಯವ್ಯಯದಲ್ಲಿ ಘೋಷಿತ ಕಾರ್ಯಕ್ರಮದಡಿ ದೇಸಿ ತಳಿಗಳ ಸಂರಕ್ಷಣೆ ಮತ್ತು ಉತ್ತೇಜನ ಕಾರ್ಯಕ್ರಮದಡಿ ದೇಸಿ ತಳಿಗಳನ್ನು ಸಂರಕ್ಷಿಸುತ್ತಿರುವ ರೈತರ ಸಮೀಕ್ಷೆ ಕೈಗೊಳ್ಳಲಾಗುತ್ತಿದೆ. ಇಲಾಖೆಯ ಅಽಕೃತ ಪೋರ್ಟಲ್‌ನಲ್ಲಿ ನೋಂದಣಿ ಕಡ್ಡಾಯವಾಗಿದೆ. ದೇಸಿ ತಳಿಗಳನ್ನು ಬೆಳೆದು ಸಂರಕ್ಷಿಸುತ್ತಿರುವ ಜಿಲ್ಲೆಯ ರೈತರು ಹತ್ತಿರದ ರೈತ ಸಂಪರ್ಕ ಕೇಂದ್ರದಲ್ಲಿ ತಾವು ಬೆಳೆಯುವ ದೇಸಿ ತಳಿಗಳ ವಿವರವನ್ನು ಮೇ 30ರೊಳಗೆ ನೋಂದಾಯಿಸಿಕೊಳ್ಳಬೇಕು. ಕಣ್ಮರೆಯಾಗುತ್ತಿರುವ ಹಾಗೂ ನಶಿಸಿ ಹೋಗುತ್ತಿರುವ ಸ್ಥಳೀಯ ಬೆಳೆಗಳ ತಳಿಗಳನ್ನು ಸಂಗ್ರಹಿಸುವ ಮತ್ತು ಸಂರಕ್ಷಿಸುವ ಉದ್ದೇಶಕ್ಕೆ ಕೈ ಜೋಡಿಸಬೇಕು. ಮಾಹಿತಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕ ಮಂಜುನಾಥ ಅಂತರವಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.