ಜಿಲ್ಲೆ

ದೈಹಿಕ, ಮಾನಸಿಕ ಆರೋಗ್ಯಕ್ಕೆ ಸೈಕ್ಲಿಂಗ್ ಉತ್ತಮ

ಪಟ್ಟಣದ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಶನಿವಾರ ಆರೋಗ್ಯ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಿಶ್ವ ಸೈಕಲ್ ದಿನಾಚರಣೆ ಪ್ರಯುಕ್ತ ತಾಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ್ ಸೈಕಲ್ ತುಳಿದು ಚಾಲನೆ ನೀಡಿದ್ದು,ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ಪಿ.ಮಾರುತಿ ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.

ಶ್ರೀರಂಗಪಟ್ಟಣ: ನಮ್ಮ ದೈನಂದಿನ ಚಟುವಟಿಕೆಗಳಲ್ಲಿ ಕೆಲ ಸಮಯವನ್ನು ಸೈಕಲ್ ತುಳಿಯುವುದಕ್ಕೆ ಮೀಸಲಿಡಬೇಕು. ಸೈಕ್ಲಿಂಗ್ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಅತ್ಯುತ್ತಮ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಎನ್.ಕೆ. ವೆಂಕಟೇಶ್ ತಿಳಿಸಿದರು.


ಪಟ್ಟಣದ ತಾಲೂಕು ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಶನಿವಾರ ಕ್ಷೇತ್ರದ ಆರೋಗ್ಯ ಇಲಾಖೆ ವತಿಯಿಂದ ವಿಶ್ವ ಸೈಕಲ್ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡಿದ್ದ ಸೈಕಲ್ ಜಾಥಾಕ್ಕೆ ಸ್ವತಃ ಸೈಕಲ್ ತುಳಿಯುವ ಮೂಲಕ ಚಾಲನೆ ನೀಡಿ ಮಾತನಾಡಿದರು.


ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರಲ್ಲೂ ಮಧುಮೇಹ, ರಕ್ತದೊತ್ತಡ ಕಾಯಿಲೆಗಳು ಸಾಮಾನ್ಯ ಎಂಬಂತೆ ಬಾಧಿಸುತ್ತಿದೆ. ಇವುಗಳನ್ನು ಸಾಧ್ಯವಾದಷ್ಟು ತಡೆಗಟ್ಟಲು ನಮ್ಮ ಜನರು ತಮ್ಮ ನಿತ್ಯದ ಚಟುವಟಿಕೆಯಲ್ಲಿ ದೈಹಿಕ ವ್ಯಾಯಾಮಕ್ಕೆ ಹೆಚ್ಚು ಒತ್ತು ನೀಡಿಬೇಕಿದೆ. ಈ ನಿಟ್ಟಿನಲ್ಲಿ ಸೈಕಲ್ ತುಳಿಯುವಿಕೆಯ ವ್ಯಾಯಾಮ ಸಹ ಪರಿಣಾಮಕಾರಿ ಎಂದರು.


ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಪಿ.ಮಾರುತಿ ಮಾತನಾಡಿದರು. ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಬೆನ್ನೂರ, ಹಿರಿಯ ಆರೋಗ್ಯ ನೀರಿಕ್ಷಕರಾದ ಜಿ.ಮೋಹನ್, ರಾಜ, ಕಿರಿಯ ಆರೋಗ್ಯ ನೀರಿಕ್ಷಕರಾದ ಚಂದನ್, ಫಣೀಂದ್ರ, ಕೃಷ್ಣೇಗೌಡ ಇತರರು ಇದ್ದರು.