ಶಹಾಪುರ : ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಕ್ರೀಡೆ ಸಹಕಾರಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಹೇಳಿದರು.
ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮೈದಾನದಲ್ಲಿ ಶಾಲಾ ಶಿಕ್ಷಣ ಇಲಾಖೆ ಮಂಗಳವಾರ ಹಮ್ಮಿಕೊಂಡ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ ಉದ್ಘಾಟಿಸಿದ ಅವರು, ವೈಯಕ್ತಿಕ ಓರೆ-ಕೋರೆಗಳನ್ನು ತಿದ್ದಿಕೊಂಡು ಹೊಂದಾಣಿಕೆ ಮನೋಭಾವ ಬೆಳೆಸಿಕೊಳ್ಳಲು ಕ್ರೀಡೆ ನೆರವಾಗುತ್ತದೆ ಎಂದರು.
ಧೈರ್ಯ ಮತ್ತು ಸಾಹಸ ಗುಣಗಳನ್ನು ಕ್ರೀಡೆಗಳಿಂದ ಬೆಳೆಸಿಕೊಳ್ಳಬಹುದು. ನಿತ್ಯ ಒಂದು ತಾಸು ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಮನಸ್ಸು ಸಶಕ್ತ ಮತ್ತು ದೇಹ ಸದೃಢವಾಗಿರುತ್ತದೆ. ಸೋಲು-ಗೆಲುವು ಸಮಾನವಾಗಿ ಸ್ವೀಕರಿಸುವ ಗುಣ ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ನಮ್ಮ ತಾಲೂಕಿನಲ್ಲಿ ಕ್ರೀಡಾ ಪ್ರತಿಭೆಗಳಿಗೇನೂ ಕೊರತೆ ಇಲ್ಲ. ರಾಜ್ಯ, ರಾಷ್ಟç ಮಟ್ಟದಲ್ಲಿ ಭಾಗವಹಿಸಿz್ದÁರೆ. ಪಠ್ಯದ ಜತೆ ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳು ಕಡ್ಡಾಯವಾಗಿ ತೊಡಗಿಸಿಕೊಳ್ಳುವಂತೆ ಪ್ರೇರೇಪಿಸುವುದು ದೈಹಿಕ ಶಿP್ಷÀಕರು ಮತ್ತು ಪಾಲಕರ ಕರ್ತವ್ಯವಾಗಿದೆ ಎಂದರು.
ಕಲೆ, ಸಂಸ್ಕೃತಿ, ಕ್ರೀಡೆ, ಎನ್‌ಸಿಸಿ ಹಾಗೂ ಎನ್‌ಎಸ್‌ಎಸ್ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಂಡಾಗ ಮಾತ್ರ ಜೀವನ ಪರಿಪೂರ್ಣವಾಗುತ್ತದೆ. ಶಿP್ಷÀಕರು ಮತ್ತು ಪಾಲಕರ ಮಾತು ಮಕ್ಕಳು ತಪ್ಪದೆ ಕೇಳಬೇಕು. ಜತೆಗೆ ಗುರು ಹಿರಿಯರನ್ನು ಗೌರವಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಈ ಕ್ರೀಡಾಂಗಣಕ್ಕೆ ಬೇಕಾದ ಮೂಲಸೌಕರ್ಯ ಒದಗಿಸುವುದಾಗಿ ಭರವಸೆ ನೀಡಿದರು.
ತಾಪಂ ಇಒ ಸೋಮಶೇಖರ ಬಿರಾದಾರÀ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ರಾಯಪ್ಪಗೌಡ ಹುಡೇದ, ಪೌರಾಯುಕ್ತ ರಮೇಶ ಬಡಿಗೇರ, ತಾಲೂಕು ದೈಹಿಕ ಶಿP್ಷÀಣಾಧಿಕಾರಿ ಶರಣಪ್ಪ ಪಾಟೀಲ್, ಅಧಿಕಾರಿಗಳಾದ ಬಿ.ಎಚ್. ಸೂರ್ಯವಂಶಿ, ರೇಣುಕಾ ಪಾಟೀಲï, ತಾಲೂಕು ಪ್ರಾಥಮಿಕ ಶಿP್ಷÀಕರ ಸಂಘದ ಅಧ್ಯP್ಷÀ ಬಸವರಾಜ ಯಾಳಗಿ, ಮುಖ್ಯಗುರು ಎಚ್.ಎಸ್. ಸೋಮಪುರ, ಚಂದ್ರಶೇಖರ ವೈದ್ಯ, ಶಿವಲಿಂಗಪ್ಪ ಇದ್ದರು.