ಯಾದಗಿರಿ ವೈಯಕ್ತಿಕ ಓರೆ-ಕೋರೆಗಳನ್ನು ತಿದ್ದಿಕೊಂಡು ಹೊಂದಾಣಿಕೆಯ ಮನೋಭಾವವನ್ನು ಬೆಳೆಸಿಕೊಳ್ಳಲು ಕ್ರೀಡೆ ನೆರವಾಗುತ್ತದೆ. ದೈಹಿಕ, ಮಾನಸಿಕ ಬೆಳವಣಿಗೆಗೆ ಸಹಾಯ ಮಾಡುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ತಿಳಿಸಿದರು.
ಶಹಾಪುರದ ಸರಕಾರಿ ಪ್ರಥಮ ದಜರ್ೆ ಕಾಲೇಜು ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆಯಿಂದ ಆಯೋಜಿಸಿದ್ದ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾಥರ್ಿಗಳ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿ, ಧೈರ್ಯ ಮತ್ತು ಸಾಹಸ ಗುಣಗಳನ್ನು ಕ್ರೀಡೆಗಳಿಂದ ಬೆಳಸಿಕೊಳ್ಳಬಹುದು. ನಿತ್ಯ ಒಂದು ತಾಸು ಆಟೋಟಗಳಲ್ಲಿ ಭಾಗವಹಿಸುವದರಿಂದ ಮನಸ್ಸು ಮತ್ತು ದೇಹ ಸದೃಢವಾಗಿರುತ್ತದೆ. ಸೋಲು-ಗೆಲುವು ಎರಡನ್ನೂ ಸಮಾನವಾಗಿ ಸ್ವೀಕರಿಸುವ ಗುಣ ಅಳವಡಿಸಿಕೊಳ್ಳಬೇಕು ಎಂದು ಮಕ್ಕಳಿಗೆ ಕಿವಿಮಾತು ಹೇಳಿದರು.
ನಮ್ಮ ತಾಲೂಕಿನಲ್ಲಿ ಕ್ರೀಡಾ ಪ್ರತಿಭೆಗಳಿಗೇನು ಕೊರತೆ ಇಲ್ಲ. ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಭಾಗವಹಿಸಿದ್ದಾರೆ. ಪಠ್ಯದ ಜತೆ ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳು ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಪ್ರೇರೇಪಿಸುವುದು ದೈಹಿಕ ಶಿಕ್ಷಕರ ಮತ್ತು ಪಾಲಕರ ಕರ್ತವ್ಯವಾಗಿದೆ. ಮಕ್ಕಳಿಗೆ ಸ್ಪಧರ್ಾ ಮನೋಭಾವನೆ ಬೆಳೆಯಬೇಕಾದರೆ ಮೊದಲು ಶಿಕ್ಷಕರು ವಿವಿಧ ಸಹಪಠ್ಯಗಳಲ್ಲಿ ಭಾಗವಹಿಸಬೇಕು ಎಂದರು.
ಕಲೆ, ಸಂಸ್ಕೃತಿ, ಕ್ರೀಡೆ, ಎನ್ಸಿಸಿ ಹಾಗೂ ಎನ್ಎಸ್ಎಸ್ ಚಟುವಟಿಕೆಗಳಲ್ಲಿ ವಿದ್ಯಾಥರ್ಿಗಳು ಸದಾ ತಮ್ಮನ್ನು ತಾವೇ ತೊಡಗಿಸಿಕೊಂಡಾಗ ಮಾತ್ರ ಜೀವನ ಪರಿಪೂರ್ಣವಾಗುತ್ತದೆ. ಈ ನಿಟ್ಟಿನಲ್ಲಿ ಶಿಕ್ಷಕರ ಮತ್ತು ಪಾಲಕರ ಮಾತುಗಳನ್ನು ಮಕ್ಕಳು ತಪ್ಪದೇ ಪಾಲಿಸಬೇಕು. ಜತೆಗೆ ಗುರು ಹಿರಿಯರನ್ನು ಗೌರವಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಈ ಕ್ರೀಡಾಂಗಣಕ್ಕೆ ಬೇಕಾದ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದರು.