ಯಾದಗಿರಿ: ಗ್ರಾಮೀಣ ಭಾಗದ ಮಕ್ಕಳು ದೈಹಿಕ ಸಾಮಥ್ರ್ಯ ಹೆಚ್ಚಿಸಿಕೊಳ್ಳಲು ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವಂತೆ ಶಾಸಕ ಶರಣಗೌಡ ಕಂದಕೂರ ಸಲಹೆ ನೀಡಿದರು.
ಶನಿವಾರ ಗುರುಮಠಕಲ್ ಪಟ್ಟಣದ ನೆಹರು ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ (ಪದವಿ ಪೂರ್ವ) ಇಲಾಖೆ ಹಾಗೂ ಸಕರ್ಾರಿ ಪದವಿ ಪೂರ್ವ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಪದವಿ ಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿ, ಕ್ರೀಡೆಗಳನ್ನು ಸಮಾನವಾಗಿ ಕಾಣಬೇಕು. ಆಟದಲ್ಲಿ ಸೋಲು-ಗೆಲುವು ಸಾಮಾನ್ಯ. ಸೋತವರು ಪ್ರತಿಷ್ಠೆಗೆ ತೆಗೆದುಕೊಳ್ಳದೆ, ಗೆಲುವು ಸಾಧಿಸಲು ಪ್ರಯತ್ನಿಸಬೇಕು ಎಂದು ಕಿವಿಮಾತು ಹೇಳಿದರು.
ನಮ್ಮ ತಾಲೂಕಿನ ಮಕ್ಕಳು ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಮಿಂಚುವಂತಾಗಬೇಕು. ಈ ಕ್ರೀಡಾಂಗಣವನ್ನು ಬರುವ ದಿನಗಳಲ್ಲಿ ಮತ್ತಷ್ಟು ಉನ್ನತೀಕರಿಸಿ, ಮೂಲಸೌಲಭ್ಯ ಒದಗಿಸುವ ಮೂಲಕ ವಿದ್ಯಾಥರ್ಿಗಳಿಗೆ ಅನುಕೂಲ ಮಾಡಿ ಕೊಡಲಾಗುವುದು ಎಂದು ಭರವಸೆ ನೀಡಿದರು.