ಜಿಲ್ಲೆ

ದೊಳ್ಳಿಪುರದಲ್ಲಿ ಮಹಿಳೆಯ ಹತ್ಯೆ

ಚಾಮರಾಜನಗರ: ತಾಲೂಕಿನ ದೊಳ್ಳಿಪುರ ಗ್ರಾಮದಲ್ಲಿ ಮಹಿಳೆಯೊಬ್ಬಳನ್ನು ಭಾನುವಾರ ರಾತ್ರಿ ಹತ್ಯೆ ಮಾಡಲಾಗಿದೆ.

ದೊಳ್ಳಿಪುರ ಗ್ರಾಮದ ನಿವಾಸಿ ಮಹೇಶ್ ಎಂಬುವವರ ಪತ್ನಿ ಶುಭಾ(38) ಮೃತರು. ಗ್ರಾಮದ ತೋಟದ ಮನೆಯಲ್ಲಿ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಸಂಬಂಧ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದರು. ಪತಿ ಮಹೇಶ್ ಮತ್ತು ಅವರ ಅತ್ತೆಯ ವಿರುದ್ಧ ಅನುಮಾನ ಬಂದ ಕೂಡಲೇ ಸಂಬಂಧಿಕರು ಪೂರ್ವ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಮೃತ ದೇಹವನ್ನು ಸಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಸಂಬಂಧ ರಾಮಸಮುದ್ರ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ ಮಾಹಿತಿ ನೀಡಿದರು.