ಯಾದಗಿರಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಜನಾಂಗದ ಮೇಲಿನ ದೌರ್ಜನ್ಯ ನಿಯಂತ್ರಣಕ್ಕೆ ಸೂಕ್ತ ಜಾಗೃತಿ ಮೂಡಿಸಬೇಕು ಎಂದು ಜಿ¯್ಲÁಧಿಕಾರಿ ಡಾ.ಸುಶೀಲಾ ಸಂಬAಧಿಸಿದ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಜಿ¯್ಲÁಧಿಕಾರಿ ಕಚೇರಿಯಲ್ಲಿ ಮಂಗಳವಾರ ಕರೆದಿದ್ದ ಎರಡನೇ ತ್ರೆÊಮಾಸಿಕ ಅನುಸೂಚಿತ ಜಾತಿ, ಅನುಸೂಚಿತ ಪಂಗಡ( ದೌರ್ಜನ್ಯ ನಿಯಂತ್ರಣ) ಕಾಯ್ದೆ ೧೯೯೫ರಡಿ ನಿಯಮ ೧೭ರ ಜಿ¯್ಲÁ ಜಾಗೃತಿ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.
ಜಿ¯್ಲೆಯಲ್ಲಿ ದೌರ್ಜನ್ಯ ಪ್ರಕರಣಗಳ ಬಗ್ಗೆ ತೀವ್ರ ನಿಗಾ ಇಡಬೇಕು. ಅದರಂತೆ ನಕಲಿ ಪ್ರಕರಣಗಳ ಮತ್ತು ದೂರುಗಳ ಬಗ್ಗೆಯೂ ಹೆಚ್ಚಿನ ನಿಗಾ ಇರಿಸುವ ಮೂಲಕ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು, ಜಿ¯್ಲÁ ಜಾಗೃತಿ ಸಮಿತಿ ಸದಸ್ಯರು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸುವಂತೆ ಸೂಚಿಸಿದರು.
ದೌರ್ಜನ್ಯ ಪ್ರಕರಣಗಳಲ್ಲಿ ನೊಂದವರಿಗೆ ಸೂಕ್ತ ರP್ಷÀಣೆ ನೀಡಬೇಕು. ವಿಶೇಷವಾಗಿ ಗ್ರಾಮಾಂತರ ಪ್ರದೇಶಗಳಲ್ಲಿ ಸೂಕ್ತ ಜಾಗೃತಿ ಮೂಡಿಸಬೇಕು. ತಾಲೂಕುವಾರು, ಗ್ರಾಮವಾರು ನಡೆಯುವ ದೌರ್ಜನ್ಯ ನಿಯಂತ್ರಣ ಸಭೆಗಳಿಗೆ ತಪ್ಪದೆ ಸಮಿತಿ ಸದಸ್ಯರನ್ನು ಆಹ್ವಾನಿಸುವಂತೆ ಸೂಚಿಸಿದರು.
ಸುರಪುರ ತಾಲೂಕಿನ ದೇವಳಗುಡ್ಡ ಸ್ಮಶಾನ ಭೂಮಿ ಒತ್ತುವರಿ ತೆರವುಗೊಳಿಸಬೇಕು.ಈ ಜನಾಂಗಕ್ಕೆ ಅವಶ್ಯಕತೆ ಇರುವ ಕಡೆ ಆದ್ಯತೆ ಮೇಲೆ ಸ್ಮಶಾನ ಭೂಮಿ ಸೌಲಭ್ಯ ಕಲ್ಪಿಸಬೇಕು. ಜನರ ಭಾವನಾತ್ಮಕ ವಿಷಯವಾಗಿರುವದರಿಂದ ನಿರ್ಲP್ಷÀ್ಯ ಮಾಡಬಾರದು ಎಂದು ಹೇಳಿದರು.
ಪರಿಶಿಷ್ಟ ಜಾತಿ,ಜನಾಂಗದ ಬಾಲಕ, ಬಾಲಕಿಯರ ವಸತಿ ನಿಲಯಗಳಿಗೆ ನಿರಂತರ ಭೇಟಿ ನೀಡಿ, ಮೂಲಸೌಲಭ್ಯ, ಸಮಸ್ಯೆಗಳ ಬಗ್ಗೆ ಪರಿಶೀಲಿಸಬೇಕು. ಚಿನ್ನಾಕಾರ ಗ್ರಾಮದಲ್ಲಿ ಡಾ.ಅಂಬೇಡ್ಕರ್ ಭವನದ ಸಮೀಪ ಗ್ರಾಮ ಪಂಚಾಯಿತಿ ಕಟ್ಟಡ ನಿರ್ಮಾಣ ಕುರಿತು ಸಂಬAಧಿಸಿದ ಅಧಿಕಾರಿಗಳು ಪರಿಶೀಲನೆ ನಡೆಸಿ ವರದಿ ನೀಡಬೇಕು ಎಂದು ತಿಳಿಸಿದರು.
ಇದಕ್ಕೂ ಮುನ್ನ ಜಿ¯್ಲÁ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಒರ್ಡಿಯಾ ಅವರು, ಎಸ್‌ಸಿ, ಎಸ್‌ಪಿ, ಎಸ್‌ಟಿಪಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ನೂರರಷ್ಟು ಅಭಿವೃದ್ಧಿಯಲ್ಲಿ ಪ್ರಗತಿ ಸಾಧಿಸುವಂತೆ ಅವರು ಸೂಚಿಸಿದರು. ಸಭೆಯಲ್ಲಿ ಜಿ¯್ಲÁ ಪೋಲಿಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್, ಜಿ¯್ಲÁ ಜಾಗೃತಿ ಸಮಿತಿ ಸದಸ್ಯರಾದ ಮರೆಪ್ಪ, ಮಲ್ಲಣ್ಣ ಗೋಗಿ, ನಿಂಗಪ್ಪ, ದಿನೇಶ, ರವಿ ಯP್ಷÀಂತಿ ಇತರರಿದ್ದರು.