ಶ್ರೀರಂಗಪಟ್ಟಣದಲ್ಲಿ ಆಯೋಜಿದ್ದ ಕಾನೂನು ಅರಿವು ನೆರವು ಜಾಗೃತಿ ಮೆರವಣಿಗೆಗೆ ಟಿ.ಗೋಪಾಲಕೃಷ್ಣ ರೈ ಚಾಲನೆ ನೀಡಿದರು. ತಹಸೀಲ್ದಾರ್ ಶ್ವೇತಾ ಎನ್. ರವೀಂದ್ರ ಇದ್ದರು. 
ಜಿಲ್ಲೆ

ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಹಾಕಲು ಸಿದ್ಧ

ಶ್ರೀರಂಗಪಟ್ಟಣ: ಮಕ್ಕಳು ಹಾಗೂ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಹಾಕಲು ಕಾನೂನು ಸೇವಾ ಸಮಿತಿ ಸಿದ್ಧವಿದೆ ಎಂದು 3ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಟಿ.ಗೋಪಾಲಕೃಷ್ಣ ರೈ ತಿಳಿಸಿದರು.

ತಾಲೂಕು ಕಾನೂನು ಸೇವಾ ಸಮಿತಿ, ತಾಲೂಕು ಆಡಳಿತ ಸಹಯೋಗದಲ್ಲಿ ಅಂಗನವಾಡಿ ಸಹಾಯಕಿಯರು ಹಾಗೂ ಆಶಾ ಕಾರ್ಯಕರ್ತೆಯರಿಗೆ ಪಟ್ಟಣದಲ್ಲಿ ಸೋಮವಾರ ಆಯೋಜಿಸಿದ್ದ ಕಾನೂನು ಅರಿವು-ನೆರವು ಜಾಗೃತಿ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದರು.

ದೇಶದ ಕಟ್ಟಕಡೆಯ ವ್ಯಕ್ತಿಯೂ ಸಮಾಜದಲ್ಲಿ ಶಾಂತಿ ಹಾಗೂ ನೆಮ್ಮದಿಯಿಂದ ಜೀವಿಸಲು ಅವಕಾಶವಿದೆ. ಒಂದು ವೇಳೆ ಆತ ದೌರ್ಜನ್ಯಕ್ಕೊಳಗಾದರೆ ಸಂವಿಧಾನದಡಿ ಕಾನೂನಿನ ನೆರವು ಪಡೆಯಬಹುದಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶೆ ಎಂ.ಡಿ.ರೂಪಾ, ಅಪರ ಹಿರಿಯ ಸಿವಿಲ್ ನ್ಯಾಯಾಧೀಶರಾದ ಮಹದೇವಪ್ಪ, ಹನುಮಂತರಾಯಪ್ಪ, ಪ್ರಧಾನ ಸಿವಿಲ್ ನ್ಯಾಯಾಧೀಶ ವೈ.ಎಚ್.ದೇವರಾಜು, ತಹಸೀಲ್ದಾರ್ ಶ್ವೇತಾ ಎನ್.ರವೀಂದ್ರ ತಹಸಿಲ್ದಾರ್, ತಾಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ್, ಆರೋಗ್ಯ ಶಿಕ್ಷಣಾಧಿಕಾರಿ ಬೆನ್ನೂರ ಇತರರು ಹಾಜರಿದ್ದರು.