ಜಿಲ್ಲಾ ಬಿಜೆಪಿ ವಕ್ತಾರ ಸಿ.ಎಚ್.ಲೋಕೇಶ್  
ಜಿಲ್ಲೆ

ಧರ್ಮಸ್ಥಳದ ಬಗ್ಗೆ ಷಡ್ಯಂತ್ರ ರೂಪಿಸುವವರ ವಿರುದ್ಧ ಕ್ರಮಕ್ಕೆ ಒತ್ತಾಯ

ಚಿಕ್ಕಮಗಳೂರು: ಹಿಂದೂಗಳ ಶ್ರದ್ಧಾ ಕೇಂದ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಸಿ, ಕ್ಷೇತ್ರದ ಪಾವಿತ್ರö್ಯಕ್ಕೆ ಕಳಂಕ ತರುವ ಷಡ್ಯಂತ್ರ ರೂಪಿಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಆ. ೧೩ರಂದು ನಗರದಲ್ಲಿ ಬೃಹತ್ ಪ್ರತಿಭಟನೆ ನೆಡೆಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಬಿಜೆಪಿ ವಕ್ತಾರ ಸಿ.ಎಚ್.ಲೋಕೇಶ್ ತಿಳಿಸಿದರು.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅನಾಮದೇಯ ವ್ಯಕ್ತಿಯೊಬ್ಬ ಹತ್ತಾರು ಹೆಣಗಳನ್ನು ಹೂತಿರುವುದಾಗಿ ನೀಡಿದ ಹೇಳಿಕೆಯನ್ನೇ ಗಂಭಿರವಾಗಿ ಪರಿಗಣಿಸಿದ ರಾಜ್ಯಸರ್ಕಾರ ಆತನಿಗೆ ಭದ್ರತೆ ನೀಡಿ ಶವಗಳ ಪತ್ತೆಗೆ ಅಧಿಕಾರಿಗಳು ಮತ್ತು ಕಾರ್ಮಿಕರನ್ನು ಬಳಸಿ ಉತ್ಖನನ ನಡೆಸುತ್ತಿದೆ. ಈ ಮೂಲಕ ಕ್ಷೇತ್ರದ ಬಗ್ಗೆ ಹಿಂದೂ ಸಮಾಜದಲ್ಲಿ ಅನುಮಾನ ಮೂಡಿಸುವ ಕುತಂತ್ರ ನಡೆಯುತ್ತಿದೆ ಎಂದು ಆರೋಪಿಸಿದರು.

ಎಡಪಂಥೀಯರ ಒತ್ತಡಕ್ಕೆ ಮಣಿದು ಪ್ರಕರಣವನ್ನು ಎಸ್‌ಐಟಿ ಗೆ ನೀಡಿರುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬಹಿರಂಗಪಡಿಸಿದ್ದಾರೆ. ಸರ್ಕಾರ ಈಗಾಗಲೇ ಹಲವು ಹಿಂದು ವಿರೋಧಿ ನಿರ್ಧಾರಗಳನ್ನು ಕೈಗೊಂಡು ಧರ್ಮಸ್ಥಳದಂಥ ಪವಿತ್ರ ಕ್ಷೇತ್ರವನ್ನು ಅಪವಿತ್ರಗೊಳಿಸಲು ಮುಂದಾಗಿವೆ ಎಂದು ದೂರಿದರು.

ಶ್ರೀ ಕ್ಷೇತ್ರದ ಪಾವಿತ್ರö್ಯತೆಗೆ ಭಂಗ ತಂದು ವಾಮಮಾರ್ಗದ ಮೂಲಕ ಅಪನಂಬಿಕೆ ಮೂಡಿಸಿ ಕ್ಷೇತ್ರದ ಬಗ್ಗೆ ಶ್ರದ್ಧೆಯನ್ನು ಕುಗ್ಗಿಸಿ ಹಿಂದೂ ಸಮಾಜವನ್ನು ದುರ್ಬಲಗೊಳಿಸುವ ಮೂಲಕ ಒಗ್ಗಟ್ಟು ಮುರಿಯಲು ಸರ್ಕಾರವೇ ಮುಂದಾಗಿರುವುದು ವಿಪರ್ಯಾಸ ಎಂದರು.

ಸೌಜನ್ಯ ಹತ್ಯೆ ಪ್ರಕರಣವನ್ನು ಮುಂದಿಟ್ಟುಕೊAಡು ಈ ರೀತಿಯ ಕುತಂತ್ರಗಳನ್ನು ಸಮಾಜ ವಿರೋಧಿಗಳು ಮಾಡುತ್ತಿದ್ದಾರೆ. ಸೌಜನ್ಯಳಿಗೆ ನ್ಯಾಯ ಸಿಗಬೇಕು ಎಂಬ ಕಾರಣಕ್ಕೆ ಹಿಂದು ಸಮಾಜ ಆರಂಭದಲ್ಲಿ ಮೌನವಾಗಿತ್ತು. ಆದರೆ ದಿನಕಳೆದಂತೆ ಕುತಂತ್ರಿಗಳ ಗುರಿ ಶ್ರೀ ಕ್ಷೇತ್ರ ಧರ್ಮಸ್ಥಳ ಎನ್ನುವುದು ಬಹಿರಂಗವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದೀಗ ಹಿಂದೂ ಸಮಾಜ ಎಚ್ಚೆತ್ತುಕೊಂಡಿದ್ದು, ಷಡ್ಯಂತ್ರವನ್ನು ಮುಂದುವರೆಸಿದರೆ ತಕ್ಕ ಶಾಸ್ತಿ ಮಾಡಲಿದೆ ಎಂದು ಎಚ್ಚರಿಸಿದ ಅವರು, ಹಿಂದೂ ಸಮಾಜದ ಧಾರ್ಮಿಕ ಆಚರಣೆಗಳಿಗೆ ಧಕ್ಕೆ ತರುವವರ ವಿರುದ್ಧ ಬಿಜೆಪಿ ತಕ್ಕ ಉತ್ತರ ನೀಡಲಿದೆ ಎಂದು ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ವಕ್ತಾರರಾದ ಬಿ.ಜೆ.ಸೋಮಶೇಖರ್, ಹಿರೇಮಗಳೂರು ಪುಟ್ಟಸ್ವಾಮಿ, ರಾಜ್ಯ ಓಬಿಸಿ ಮೋರ್ಚಾ ಕಾರ್ಯದರ್ಶಿ ಡಿ. ರಾಜಪ್ಪ, ಮಾಧ್ಯಮ ಪ್ರಮುಖ್ ದಿನೇಶ್ ಕೋಟೆ, ಸುರೇಶ್ ಉಪಸ್ಥಿತರಿದ್ದರು.