ಜಿಲ್ಲೆ

ನ.1, 2 ರಂದು ಕುಲಾಲ ಚಾಂಪಿಯನ್ಸ್ ಟ್ರೋಫಿ

ನಾಪೋಕ್ಲು: ಕೊಡಗು ಜಿಲ್ಲಾ ಕುಲಾಲ (ಕುಂಬಾರ)ರ ಸಂಘದ ಯುವ ಘಟಕದ ವತಿಯಿಂದ ನ.1 ಮತ್ತು 2 ರಂದು ಕೊಡಗು ಜಿಲ್ಲಾ ಕುಲಾಲ (ಕುಂಬಾರ) ಚಾಂಪಿಯನ್ಸ್ ಟ್ರೋಫಿ-2025 ಸೀಸನ್-1 ನಡೆಯಲಿದೆ.

ಮೂರ್ನಾಡುವಿನ ಬಾಚೆಟ್ಟಿರ ಲಾಲು ಮುದ್ದಯ್ಯ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯಾವಳಿಗೆ ನ.1 ರಂದು ಬೆಳಗ್ಗೆ 9 ಗಂಟೆಗೆ ಚಾಲನೆ ದೊರೆಯಲಿದೆ. ವಿಜೇತ ತಂಡಕ್ಕೆ 20 ಸಾವಿರ ರೂ.ನಗದು ಮತ್ತು ಆಕರ್ಷಕ ಟ್ರೋಫಿ, ದ್ವಿತೀಯ 15 ಸಾವಿರ ರೂ.ನಗದು ಮತ್ತು ಟ್ರೋಫಿ, ತೃತೀಯ ಬಹುಮಾನ 5 ಸಾವಿರ ರೂ.ನಗದು ಮತ್ತು ಆಕರ್ಷಕ ಟ್ರೋಫಿ ಹಾಗೂ ಹಲವು ವೈಯಕ್ತಿಕ ಬಹುಮಾನ ನೀಡಲಾಗುವುದು.

ಪಂದ್ಯಾವಳಿಯು ಕೊಡಗು ಜಿಲ್ಲಾ ಕುಲಾಲ (ಕುಂಬಾರ) ಕುಲಬಾಂಧವರಿಗೆ ಮಾತ್ರ ಸೀಮಿತವಾಗಿದ್ದು, 4 ಓವರ್‌ಗಳಿಗೆ ಸೀಮಿತವಾಗಿದೆ ಎಂದು ಸಂಘದ ಯುವ ಘಟಕ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.