ಜಿಲ್ಲೆ

ನ.7 ರಂದು ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ

ಚಾಮರಾಜನಗರ: ರೈತರ ಸಮಸ್ಯೆಗಳನ್ನು ಬಗೆಹರಿಸಲು ಆಗ್ರಹಿಸಿ ತಾಲೂಕುಗಳಿಂದ ಬೈಕ್‌ರ‌್ಯಾಲಿ ಮೂಲಕ ಆಗಮಿಸಿ ನ.7 ರಂದು ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಹಾಕಲಾಗುವುದು ಎಂದು ಸಾಮೂಹಿಕ ನಾಯಕತ್ವದ ರಾಜ್ಯ ರೈತಸಂಘ ಜಿಲ್ಲಾ ಘಟಕದ ಅಧ್ಯಕ್ಷೀಯ ಮಂಡಳಿಯ ಸದಸ್ಯ ಹೊನ್ನೂರು ಪ್ರಕಾಶ್ ಹೇಳಿದರು.

ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿಯಿಂದ ಹಲವಾರು ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಸೂಕ್ತ ಪರಿಹಾರವನ್ನು ವಿತರಣೆ ಮಾಡಿಲ್ಲ. ಸೂಕ್ತ ಸಮಯಕ್ಕೆ ಬೆಳೆವಿಮೆ ಸಿಗದಿರುವ ಕಾರಣಕ್ಕೆ ರೈತರು ಕಂಗಲಾಗಿದ್ದಾರೆ. ಈ ನಿಟ್ಟಿನಲ್ಲಿ ರೈತರ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಆಗ್ರಹಿಸಿ ಬೈಕ್ ರ‌್ಯಾಲಿಯನ್ನು ಆಯೋಜಿಸಲಾಗಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಜಿಎಂ ಮುಕ್ತ ಭಾರತ, ಜಿಎಂ ಮುಕ್ತ ಕರ್ನಾಟಕ ಎಂದು ೋಷಣೆ ಮಾಡಬೇಕು. ಜಿಲ್ಲೆಯಲ್ಲಿ ಕರಾ ನಿರಾಕರಣ ಚಳುವಳಿ ಸಂದರ್ಭದಲ್ಲಿ ಕಟ್ಟಲಾಗದ ವಿದ್ಯುತ್ ಬಾಕಿಯನ್ನು ಮನ್ನಾ ಮಾಡಬೇಕು. ಭತ್ತಕ್ಕೆ ಕೇಂದ್ರ ಸರ್ಕಾರದ ಎಂಎಸ್‌ಪಿ ಮೇಲೆ ಹೆಚ್ಚುವರಿ 500 ರೂ.ಗಳನ್ನು ರಾಜ್ಯ ಸಕಾರ ಕೊಡಬೇಕು. ಹನೂರು ತಾಲೂಕಿನ ವ್ಯಾಪ್ತಿಯಲ್ಲಿರುವ ಕಾಡಂಚಿನ ಗ್ರಾಮಗಳಿಗೆ ಮೂಲಸೌಕರ್ಯವನ್ನು ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಗೋಷ್ಠಿಯಲ್ಲಿ ಅಧ್ಯಕ್ಷೀಯ ಮಂಡಳಿಯ ಸದಸ್ಯರಾದ ಮಾಡ್ರಹಳ್ಳಿ ಪಾಪಣ್ಣ, ಮುಳ್ಳೂರು ಈಶ್ವರ್ ಪ್ರಭು, ಬಂದೀಗೌಡನಹಳ್ಳಿ ನಟರಾಜ್, ಸಂಘಟನಾ ಕಾರ್ಯದರ್ಶಿ ನಿರಂಜನ್ ಮುಳ್ಳೂರು, ಜಿಲ್ಲಾ ಕಾರ್ಯದರ್ಶಿ ಲೋಕೇಶ್ ಹಾಜರಿದ್ದರು.