ಚಾಮರಾಜನಗರ: ಕಾಲೇಜು ಶಿಕ್ಷಣ ಇಲಾಖೆ ಹಾಗೂ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಸಂಯುಕ್ತಾಶ್ರಯದಲ್ಲಿ 2024-25ನೇ ಸಾಲಿನ ಸಾಂಸ್ಕೃತಿಕ, ಕ್ರೀಡೆ, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ವಿವಿಧ ಸಮಿತಿಗಳ ಉದ್ಘಾಟನಾ ಸಮಾರಂಭವನ್ನು ನ.8ರಂದು ಬೆಳಗ್ಗೆ 10.30 ಗಂಟೆಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜೆ.ಎಚ್ ಪಟೇಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ ಅಧ್ಯಕ್ಷ ಹಾಗೂ ಶಾಸಕ ಮತ್ತು ಕಾಲೇಜು ಅಭಿವೃದ್ದಿ ಸಮಿತಿಯ ಅಧ್ಯಕ್ಷರೂ ಆಗಿರುವ ಸಿ. ಪುಟ್ಟರಂಗಶೆಟ್ಟಿ ಸಮಾರಂಭ ಉದ್ಘಾಟಿಸುವರು. ಕುದೇರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಥಿಯೋಡರ್ ಲೂಥರ್ ಮುಖ್ಯ ಭಾಷಣ ಮಾಡುವರು. ಚಾಮರಾಜನಗರ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಎಂ.ಆರ್ ಸುಮತಿ ಅಧ್ಯಕ್ಷತೆ ವಹಿಸುವರು.
ಕೊಳ್ಳೇಗಾಲದ ಶ್ರೀಮಹದೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಜಯಶಂಕರ್, ಚಾಮರಾಜನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ಸಹ ಪ್ರಾಧ್ಯಾಪಕರು ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಸಂಯೋಜಕರಾದ ಡಾ. ಜಿ. ಮಲ್ಲೇಶ್ ಪಾಲ್ಗೊಳ್ಳುವರು.
ಐ.ಕ್ಯೂ.ಎ.ಸಿ ಸಮಿತಿ ಸಂಚಾಲಕಿ ಎಸ್.ಆರ್. ದೀಪ, ಸಾಂಸ್ಕೃತಿಕ ಸಮಿತಿ ಸಂಚಾಲಕಿ ಡಾ. ಹೆಚ್.ಎಸ್ ರುಕ್ಮಿಣಿ, ಕ್ರೀಡಾ ಸಮಿತಿ ಸಂಚಾಲಕಿ ಡಾ. ಶಾಂತರಾಜು, ರಾಷ್ಟ್ರೀಯ ಸೇವಾ ಯೋಜನಾ ಘಟಕ ಸಂಚಾಲಕಿ ಡಾ. ಎಂ.ಸಿ ಪ್ರಭಾವತಿ, ಪತ್ರಾಂಕಿತ ವ್ಯವಸ್ಥಾಪಕಿ ಜಿ.ಎನ್. ಸಾಕಮ್ಮ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.