ಬಾಗಲಕೋಟೆ: ಕರ್ನಾಟಕ ರಾಜ್ಯ ವಿಧಾನ ಮಂಡಲದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಮಿತಿ ಅಧ್ಯಕ್ಷ ಹಾಗೂ ಸದಸ್ಯರು ನ.೧೫ ರಂದು ಜಿಲ್ಲೆಗೆ ಭೇಟಿ ನೀಡಿ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನೆ ನಡೆಸಲಿದ್ದು, ಎಲ್ಲಾ ಇಲಾಖೆಗಳ ಅಽಕಾರಿಗಳು ಅಗತ್ಯ ಸಿದ್ದತೆಯಲ್ಲಿರಬೇಕು ಎಂದು ಜಿಲ್ಲಾಽಕಾರಿ ಜಾನಕಿ ಕೆ.ಎಂ ಸೂಚಿಸಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಸಂಜೆ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ ಸಭೆಯ ಪೂರ್ವ ಸಿದ್ದತೆ ಕುರಿತು ಅಽಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಕರ್ನಾಟಕ ವಿಧಾನ ಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯು ಜಿಲ್ಲೆಯಲ್ಲಿರುವ ಎಲ್ಲಾ ಇಲಾಖೆಗಳಲ್ಲಿನ ಕಳೆದ ಮೂರು ವರ್ಷಗಳಲ್ಲಿ ಸಾಮಾನ್ಯ ಕಾರ್ಯಕ್ರಮಗಳು ಮತ್ತು ಎಸ್ಸಿಪಿ ಹಾಗೂ ಟಿಎಸ್‌ಪಿ ಯೋಜನೆಗಳಡಿ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಸಮುದಾಯದವರ ಕಲ್ಯಾಣ ಕಾರ್ಯಕ್ರಮಗಳು, ವಿವಿಧ ಯೋಜನೆಗಳ ಕುರಿತು ಪ್ರಶ್ನಾವಳಿಗಳ ರೀತಿಯಲ್ಲಿ ಅಽಕಾರಿಗಳೊಂದಿಗೆ ಚರ್ಚಿಸಲಿದ್ದು, ಎಲ್ಲಾ ಇಲಾಖೆಯ ಅಽಕಾರಿಗಳು ನಿಖರವಾದ ಮಾಹಿತಿಯನ್ನು ಮತಕ್ಷೇತ್ರವಾರು ರೀತಿಯಲ್ಲಿ ತಯಾರಿ ಹೊಂದಿರಬೇಕು ಎಂದು ಹೇಳಿದರು.
ಪರಿಶಿಷ್ಟರ ಕಲ್ಯಾಣ ಸಮಿತಿಯ ಸಭೆಗೆ ಜಿಲ್ಲಾ ಮಟ್ಟದ ಎಲ್ಲಾ ಇಲಾಖೆಗಳ ಸಂಬಂಧಪಟ್ಟ ಅಽÃಕಾರಿಗಳು ಕಟ್ಟಾಯವಾಗಿ ಹಾಜರಾಗಿ ಸಮಿತಿಯು ಕೇಳುವ ಎಲ್ಲ ಮಾಹಿತಿಯನ್ನು ಒದಗಿಸಬೇಕು. ಸಮಿತಿಯ ಸಭೆ ನಡೆಸಲು ಸೂಕ್ತ ವ್ಯವಸ್ಥೆ ಮಾಡುವುದರ ಜೊತೆಗೆ ಅಧ್ಯಕ್ಷರು ಮತ್ತು ಸದಸ್ಯರನ್ನು ಸ್ವಾಗತಿಸಲು ಅವಶ್ಯವಿರುವ ಎಲ್ಲಾ ರೀತಿಯ ಶಿಷ್ಟಾಚಾರ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶರಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಽಕಾರಿ ಶಶಿಧರ ಕುರೇರ್ ಮಾತನಾಡಿ, ಆಯಾ ಇಲಾಖೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯದವರಿಗೆ ಇರುವ ಸೌಲಭ್ಯಗಳು ಯಾವವು, ಅನುದಾನ ಬಂದಿದ್ದು ಎಷ್ಟು ಹಾಗೂ ಬಳಕೆಯಾದ ಮತ್ತು ಉಳಿದಿರುವ ಅನುದಾನ ಮತ್ತು ಅಂಕಿ ಅಂಶಗಳ ಬಗ್ಗೆ ಸರಿಯಾದ ಮಾಹಿತಿಯನ್ನು ಇಟ್ಟುಕೊಂಡಿರಬೇಕು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿ ಅಮರನಾಥ ರೆಡ್ಡಿ ಮಾತನಾಡಿ, ಸುಳ್ಳು ಜಾತಿ ಪ್ರಕರಣಗಳು, ದಲಿತ ಸಮುದಾಯದವರ ಮೇಲೆ ಹಲ್ಲೆ ಅಥವಾ ಬಹಿಷ್ಕಾರ ಮಾಡಿರುವ ಪ್ರಕರಣಗಳ ಕುರಿತು ಮಾಹಿತಿ ಕೇಳುವದರಿಂದ ಪೂರ್ವಸಿದ್ದತೆ ಸರಿಯಾಗಿ ಮಾಡಿಕೊಳ್ಳಿ ಅನಗತ್ಯವಾದ ಗೊಂದಲವನ್ನು ಸೃಷ್ಠಿಸಿಕೊಳ್ಳದೆ ಸಭೆ ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಉಪ ಅರಣ್ಯ ಸಂರಕ್ಷಣಾಽಕಾರಿ ರುತ್ರೇನ ಪಿ. ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸದಾಶಿವ ಬಡಿಗೇರ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಽಕಾರಿಗಳು ಉಪಸ್ಥಿತರಿದ್ದರು.