ಬಾಗಲಕೋಟೆ ನಗರದ ಡಿಸಿಸಿ ಬ್ಯಾಂಕ್ ಸಭಾಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಜಯಕುಮಾರ ಸರಾನಯಕ ಮಾತನಾಡಿದರು. ಶಾಸಕ, ಡಿಸಿಸಿ ಬ್ಯಾಂಕ್ ನಿರ್ದೇಶಕ ಎಚ್.ವೈ.ಮೇಟಿ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಮುರುಗೇಶ ಕಡ್ಲಿಮಟ್ಟಿ, ನಿರ್ದೇಶಕ ಪ್ರಕಾಶ ತಪಶೆಟ್ಟಿ, ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ದ್ಯಾಮಣ್ಣ ಗಾಳಿ ಇದ್ದರು. 
ಜಿಲ್ಲೆ

ನ.೧೭ ರಂದು ಸಹಕಾರಿ ಸಪ್ತಾಹ ಸಮಾರಂಭ

ಬಾಗಲಕೋಟೆ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ರಾಜ್ಯ ಅಪೆಕ್ಸ್ ಬ್ಯಾಂಕ್, ಬಾಗಲಕೋಟೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ಗಳ ನೇತೃತ್ವದಲ್ಲಿ ೭೧ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರಂಭ ನ.೧೭ ರಂದು ನವನಗರದ ತೋವಿವಿ ಪಕ್ಕದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಜಯಕುಮಾರ ಸರಾನಯಕ ಹೇಳಿದರು.

ನಗರದ ಡಿಸಿಸಿ ಬ್ಯಾಂಕ್ ಸಭಾಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನವನಗರದ ಹುಬ್ಬಳ್ಳಿ ಬೈಪಾಸ್ ರಸ್ತೆಯ ತೋಟಗಾರಿಕೆ ವಿಶ್ವವಿದ್ಯಾಲಯ ಬಳಿಯ ಮೈದಾನದಲ್ಲಿ ಜರಗುವ ಸಮಾರಂಭವನ್ನು ಅಂದು ಬೆಳಗ್ಗೆ ೧೦ ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ, ಸಹಕಾರ ಸಚಿವ ಕೆ.ಎನ್.ರಾಜಣ್ಣ, ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ, ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ, ಜವಳಿ ಸಚಿವ ಶಿವಾನಂದ ಪಾಟೀಲ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಜಿ.ಟಿ.ದೇವೇಗೌಡ ಅವರು ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ, ಶಾಸಕ ಎಚ್.ವೈ.ಮೇಟಿ ಅವರು ಅಧ್ಯಕ್ಷತೆ ವಹಿಸುವರು. ಅವಳಿ ಜಿಲ್ಲೆ ಜನಪ್ರತಿನಿಽಗಳು ಉಪಸ್ಥಿತರಿರುವರು ಎಂದು ವಿವರಿಸಿದರು.

ಕಾರ್ಯಕ್ರಮದಲ್ಲಿ ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳ ೨೦ ಸಾವಿರಕ್ಕೂ ಅಽಕ ಸಹಕಾರಿಗಳು ಭಾಗವಹಿಸುತ್ತಿದ್ದು, ಎಲ್ಲ ಸಹಕಾರ ಸಂಘಗಳ ಪದಾಽಕಾರಿಗಳು ಸದಸ್ಯರು ಉಪಸ್ಥಿತರಿರಲಿದ್ದಾರೆ. ಕಾರ್ಯಕ್ರಮದ ಯಶಸ್ಸಿಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಶಾಸಕ, ಡಿಸಿಸಿ ಬ್ಯಾಂಕ್ ನಿರ್ದೇಶಕ ಎಚ್.ವೈ.ಮೇಟಿ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಮುರುಗೇಶ ಕಡ್ಲಿಮಟ್ಟಿ, ಬಸವೇಶ್ವರ ಬ್ಯಾಂಕ್ ಅಧ್ಯಕ್ಷ, ಡಿಸಿಸಿ ಬ್ಯಾಂಕ್ ನಿರ್ದೇಶಕ ಪ್ರಕಾಶ ತಪಶೆಟ್ಟಿ, ಶಿವನಗೌಡ ಅಗಸಿಮುಂದಿನ, ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ದ್ಯಾಮಣ್ಣ ಗಾಳಿ, ಡಿಸಿಸಿ ಬ್ಯಾಂಕ್ ಸಿಇಒ ಸಿದ್ದನಗೌಡ ನೀಲಪ್ಪನವರ ಉಪಸ್ಥಿತರಿದ್ದರು.