ಬಾಗಲಕೋಟೆ ನಗರದ ಬಿವಿವಿ ಸಂಘದ ಮಿನಿ ಸಭಾಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಬಿವಿವಿ ಸಂಘದ ಕಾರ್ಯಾಧ್ಯಕ್ಷ, ಮಾಜಿ ಶಾಸಕ ವೀರಣ್ಣ ಚರಂತಿಮಠ ಮಾತನಾಡಿದರು. ಬಿವಿವಿ ಸಂಘದ ಗೌರವ ಕಾರ್ಯದರ್ಶಿ ಮಹೇಶ ಅಥಣಿ, ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಗುರುಬಸವ ಸೂಳಿಭಾವಿ,ಡಾ.ಪ್ರಕಾಶ ವಡವಡಗಿ ಇದ್ದರು. 
ಜಿಲ್ಲೆ

ನ.೨೬ ರಂದು ಎಂಬಿಎ ಮಹಾವಿದ್ಯಾಲಯದ ಪದವಿ ಪ್ರದಾನ

ಬಾಗಲಕೋಟೆ: ಬಿವಿವಿ ಸಂಘದ ಇನ್ಸಿಟಿಟ್ಯೂಟ್ ಆಫ್ ಮ್ಯಾನೇಜಮೆಂಟ್ ಸ್ಟಡೀಸ್ (ಎಂಬಿಎ ಮಹಾವಿದ್ಯಾಲಯದ) ಪದವಿ ಪ್ರದಾನ ಸಮಾರಂಭ ನ.೨೬ರಂದು ಬಿಇಸಿ ಕಾಲೇಜಿನ ಗ್ಯಾಲರಿ ಹಾಲ್‌ದಲ್ಲಿ ನಡೆಯಲಿದೆ ಎಂದು ಬಿವಿವಿ ಸಂಘದ ಕಾರ್ಯಾಧ್ಯಕ್ಷ ವೀರಣ್ಣ ಚರಂತಿಮಠ ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯ ಅತಿಥಿಗಳಾಗಿ ಇಂಡಿಯನ್ ಇನ್ಸಿಟಿಟ್ಯೂಟ್ ಆಫ್ ಮ್ಯಾನೇಜಮೆಂಟ್ ಸ್ಟಡೀಸ್ ನಾಗಪುರದ ನಿರ್ದೇಶಕ ಡಾ.ಭೀಮರಾಯ ಮೇತ್ರಿ ಆಗಮಿಸಲಿದ್ದಾರೆ. ೨೦೦ ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಡಲಾಗುವುದು ಎಂದರು.

ಬಿವಿವಿ ಸಂಘದ ಗೌರವ ಕಾರ್ಯದರ್ಶಿ ಮಹೇಶ ಅಥಣಿ, ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಗುರುಬಸವ ಸೂಳಿಭಾವಿ,ಡಾ.ಪ್ರಕಾಶ ವಡವಡಗಿ ಇದ್ದರು.