ಬಾಗಲಕೋಟೆ: ಜಿಲ್ಲೆಯಾದ್ಯಂತ ನ. ೪ ರಿಂದ ೨೧ ವರೆಗೆ ಕುಷ್ಟರೋಗ ಪ್ರಕರಣ ಪತ್ತೆ ಹಚ್ಚುವ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಽಕಾರಿ ಶಶಿಧರ ಕುರೇರ ಹೇಳಿದರು.
ಜಿಲ್ಲಾ ಪಂಚಾಯಿತಿ ಸಭಾ ಭವನದಲ್ಲಿ ಜರುಗಿದ ಕುಷ್ಟರೋಗ ಪತ್ತೆ ಹಚ್ಚುವು ಅಭಿಯಾನ ಕಾರ್ಯಕ್ರಮದ ಕುರಿತು ಅಂತರ ಇಲಾಖಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಅಭಿಯಾನ ಕಾರ್ಯಕ್ರಮ ಅನುಷ್ಠಾನಕ್ಕೆ ೧೭೧೮ ತಂಡಗಳನ್ನು ರಚನೆ ಮಾಡಲಾಗಿದೆ. ಆಶಾ, ಆರೋಗ್ಯ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸ್ವಯಂ ಸೇವಕರು ಆರೋಗ್ಯ ಇಲಾಖೆಯ ಅಽಕಾರಿಗಳು ಮತ್ತು ಸಿಬ್ಬಂದಿಗಳು ಕಾರ್ಯನಿರ್ವಹಿಸಲಿದ್ದಾರೆ ಎಂದರು.
ಪ್ರತಿ ತಂಡದಲ್ಲಿ ಓರ್ವ ಮಹಿಳೆ ಮತ್ತು ಪುರುಷರಿದ್ದು, ಮನೆ ಮನೆಗೆ ಭೇಟಿ ನೀಡಿ ದೇಹದ ಮೇಲೆ ಬಿಳಿ, ತಾಮ್ರ ಬಣ್ಣದ ಸ್ಪರ್ಶ ಜ್ಞಾನವಿಲ್ಲದ ಮಚ್ಚೆಗಳು, ಉಬ್ಬದ ನರಗಳು, ಚರ್ಮದಲ್ಲಿ ಗಂಟು, ಕಣ್ಣುಗಳು ಪೂರ್ಣ ಪ್ರಮಾಣದಲ್ಲಿ ಮುಚ್ಚದೇ ಇರುವ ಲಕ್ಷಣಗಳು ಕಂಡು ಬಂದರೆ ತಂಡಗಳು ಚಿಕಿತ್ಸೆಗಾಗಿ ಆರೋಗ್ಯ ಕೇಂದ್ರಕ್ಕೆ ಶಿಫಾರಸ್ಸು ಮಾಡಲಿದ್ದಾರೆ. ಸ್ಲಮ್ ಏರಿಯಾ, ಇಟ್ಟಂಗಿ ಭಟ್ಟಿ, ಕಟ್ಟಡ ನಿರ್ಮಾಣ ಮಾಡುವ ಸ್ಥಳ, ಕಬ್ಬಿನ ಗ್ಯಾಂಗ್ ಪ್ರದೇಶಗಳಲ್ಲಿ ಆದ್ಯತೆ ಕೊಡಬೇಕು. ಎಲ್ಲ ಅಽಕಾರಿಗಳು ಮತ್ತು ಸಿಬ್ಬಂದಿಗಳು ಮುತುವರ್ಜಿ ವಹಿಸಿ, ಎಲ್ಲ ಇಲಾಖೆ ಸಮನ್ವಯದೊಂದಿಗೆ ಕಾರ್ಯಕ್ರಮ ಯಶಸ್ವಿಗೊಳಿಸಲು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಽಕಾರಿ ಡಾ.ಸುವರ್ಣ ಕುಲಕರ್ಣಿ, ಜಿಲ್ಲಾ ಕುಷ್ಟರೋಗ ಮತ್ತು ಜಿಲ್ಲಾ ಮಾನಸಿಕ ಕಾರ್ಯಕ್ರಮ ಅಽಕಾರಿ ಶಿವನಗೌಡ ಪಾಟೀಲ, ಜಿಲ್ಲಾ ಸಮೀಕ್ಷಣಾಽಕಾರಿ ಡಾ.ದಯಾನಂದ ಕರೇನ್ನವರ, ಜಿಲ್ಲಾ ಮಲೇರಿಯಾ ನಿಯಂತ್ರಣಾಽಕಾರಿ ಡಾ.ಕುಸುಮಾ ಮಾಗಿ, ಡಾ.ಸೀಮಾ ಹುದ್ದಾರ, ಡಾ.ಗೈಬಸಾಬ ಗಲಗಲಿ, ಡಾ.ಅನಸೂಯಾ ಮಾಗಿ, ಡಾ.ಎಸ್.ಎಸ್.ಅಂಗಡಿ, ಡಾ.ಎ.ಎ.ಸೂರ್ಯವಂಶಿ, ಡಾ.ಅನೀಲಕುಮಾರ ಬದನೂರ, ಡಾ.ಅನೀಲ ಉಕ್ಕಲಿ, ಜಿಲ್ಲಾ ಕುಷ್ಟರೋಗ ಸಂಘದ ಪದಾಽಕಾರಿ ನಾಗಪ್ಪ ಮೊಮ್ಮಣ್ಣವರ, ಬಸವರಾಜ ಡೆಂಗಿ, ಮಂಜುನಾಥ ಕುರಿತು ಉಪಸ್ಥಿತರಿದ್ದರು.