ಬಾಗಲಕೋಟೆ ನಗರದ ಪ್ರೇಸ್‌ಕ್ಲಬ್‌ನಲ್ಲಿ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ಜಿಲ್ಲಾ ಘಟಕದ ದ್ಯಾಮಣ್ಣ ಗಾಳಿ ಬಿತ್ತಿ ಪತ್ರ ಬಿಡುಗಡೆಗೊಳಿಸಿದರು. ಸಮಾಜದ ಮುಖಂಡರಾದ ಲಕ್ಷ್ಮಣ ಮಾಲಗಿ, ಹಣಮಂತ ದೋಣಿ, ಆರ್.ಜಿ.ಸನ್ನಿ, ಪ್ರಹ್ಲಾದ ಸೊನ್ನದ, ಮಹಾದೇವ ನಾಯಕ, ಜಯರಾಜ್ ಹಾದಿಕಾರ ಉಪಸ್ಥಿತರಿದ್ದರು. 
ಜಿಲ್ಲೆ

ನ.೫ ರಂದು ಜಿಲ್ಲಾ ವಾಲ್ಮೀಕಿ ಜನ ಜಾಗೃತಿ ಸಮಾವೇಶ

ಬಾಗಲಕೋಟೆ: ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಜಿಲ್ಲಾ ಘಟಕದಿಂದ ನ.೫ ರಂದು ಜಿಲ್ಲಾ ಮಟ್ಟದ ವಾಲ್ಮೀಕಿ ಜನಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಮಹಾಸಭಾ ಜಿಲ್ಲಾಧ್ಯಕ್ಷ ದ್ಯಾಮಣ್ಣ ಗಾಳಿ ಹೇಳಿದರು.

ನಗರದ ಪ್ರೇಸ್‌ಕ್ಲಬ್‌ನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ ೧೧ ಗಂಟೆಗೆ ನವನಗರ ಕಲಾ ಭವನದಲ್ಲಿ ನಡೆಯುವ ಜನ ಜಾಗೃತಿ ಸಮಾವೇಶದಲ್ಲಿ ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ, ಸಹಕಾರ ಇಲಾಖೆ ಸಚಿವ ಕೆ. ಎನ್.ರಾಜಣ್ಣ, ಪರಿಶಿಷ್ಟ ಪಂಗಡ ಇಲಾಖೆ ಸಚಿವ ಬಿ. ನಾಗೇಂದ್ರ ಹಾಗೂ ಬಾಗಲಕೋಟೆ ಜಿಲ್ಲೆಯ ಉಸ್ತುವಾರಿ ಸಚಿವ ಆರ್. ಬಿ.ತಿಮ್ಮಾಪುರ, ಶಾಸಕರಾದ ಎಚ್.ವೈ.ಮೇಟಿ, ಜೆ.ಟಿ.ಪಾಟೀಲ, ಜಗದೀಶ ಗುಡಗುಂಟಿ, ವಿಜಯಾನಂದ ಕಾಶಪ್ಪನವರ, ವಿ.ಪ ಸದಸ್ಯ ಪಿ.ಎಚ್.ಪೂಜಾರ ಸೇರಿದಂತೆ ಶಾಸಕರು, ಸಂಸದರು, ವಿ.ಪ ಸದಸ್ಯರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಈ ಸಂದರ್ಭದಲ್ಲಿ ೨೦೨೨-೨೩ ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಹೆಚ್ಚಿನ ಅಂಕ ಗಳಿಸಿದ ವಾಲ್ಮೀಕಿ ಸಮಾಜದ ವಿದ್ಯಾರ್ಥಿಗಳಿಗೆ ಮತ್ತು ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಕ್ರೀಡೆಯಲ್ಲಿ ಗುರುತಿಸಿಕೊಂಡ ಸಾಧಕರಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಿದ್ದೇವೆ. ಕಾರ್ಯಕ್ರಮಕ್ಕೆ ವಾಲ್ಮೀಕಿ ಗುರುಪೀಠ ರಾಜನಹಳ್ಳಿಯ ಪ್ರಸನ್ನಾನಂದಪುರಿ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಸಮಾವೇಶದಲ್ಲಿ ಸಮಾಜದ ಕುರಿತು ಚಿಂತನ -ಮಂಥನ ನಡೆಯಲಿದೆ ಎಂದರು.

ಸಮಾಜದ ಮುಖಂಡರಾದ ಲಕ್ಷ್ಮಣ ಮಾಲಗಿ, ಹಣಮಂತ ದೋಣಿ, ಆರ್.ಜಿ.ಸನ್ನಿ, ಪ್ರಹ್ಲಾದ ಸೊನ್ನದ, ಮಹಾದೇವ ನಾಯಕ, ಜಯರಾಜ್ ಹಾದಿಕಾರ ಉಪಸ್ಥಿತರಿದ್ದರು.