ಬಾಗಲಕೋಟೆ ಜಿಲ್ಲಾಽಕಾರಿಗಳ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಎಸ್ಸೆಸ್ಸೆಲ್ಸಿ ಪರೀಕ್ಷೆ-೨ ಸಿದ್ದತೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಽಕಾರಿ ಜಾನಕಿ ಕೆ.ಎಂ ಅಽಕಾರಿಗಳಿಗೆ ಮಾತನಾಡಿದರು. ಅಪರ ಜಿಲ್ಲಾಽಕಾರಿ ಪರಶುರಾಮ ಶಿನ್ನಾಳಕರ, ಹೆಚ್ಚುವರಿ ಪೊಲೀಸ್ ವರಿಷ್ಠಾಽಕಾರಿ ಮಹಾಂತೇಶ ಜಿದ್ದಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಿ.ಕೆ.ನಂದನೂರ ಇತರರು ಇದ್ದರು. 
ಜಿಲ್ಲೆ

ನಕಲು ಮುಕ್ತ ಪರೀಕ್ಷೆ ನಡೆಸಲು ಸೂಚನೆ

ಬಾಗಲಕೋಟೆ: ಜಿಲ್ಲೆಯಾದ್ಯಂತ ಜೂ.೧೪ ರಿಂದ ೨೨ ವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ-೨ ನಡೆಯಲಿದ್ದು, ಪರೀಕ್ಷೆಯನ್ನು ನಕಲು ಮುಕ್ತವಾಗಿ ನಡೆಸುವಂತೆ ಜಿಲ್ಲಾಽಕಾರಿ ಜಾನಕಿ ಕೆ.ಎಂ ಅಽಕಾರಿಗಳಿಗೆ ಸೂಚಿಸಿದರು.

ಜಿಲ್ಲಾಽಕಾರಿಗಳ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಎಸ್ಸೆಸ್ಸೆಲ್ಸಿ ಪರೀಕ್ಷೆ-೨ ಸಿದ್ದತೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಒಟ್ಟು ೨೨ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿದ್ದು, ಬಾದಾಮಿ ಮತ್ತು ಬಾಗಲಕೋಟೆ ತಲಾ ೪, ಬೀಳಗಿ, ಹುನಗುಂದ ಮತ್ತು ಮುಧೋಳದಲ್ಲಿ ತಲಾ ೩, ಜಮಖಂಡಿಯಲ್ಲಿ ೫ ಸೇರಿ ಒಟ್ಟು ೨೨ ಪರೀಕ್ಷಾ ಕೇಂದ್ರಗಳಿವೆ. ಒಟ್ಟು ೬೭೮೩ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದರು.

ಪರೀಕ್ಷೆಗೆ ೨೨ ಮುಖ್ಯ ಅಽÃಕ್ಷಕರು, ೪ ಜನ ಉಪ ಮುಖ್ಯ ಅಽÃಕ್ಷಕರು, ೨೨ ಜನ ಅಭಿರಕ್ಷಕರು, ೨೨ ಮೊಬೈಲ್ ಸ್ವಾಽÃನಾಽಕಾರಿಗಳು ಹಾಗೂ ೨೨ ಸ್ಥಾನಿಕ ಜಾಗೃತ ದಳದ ಅಽಕಾರಿಗಳು, ೨೮ ವೆಬ್ ಕಾಸ್ಟಿಂಗ್ ಸಿಬ್ಬಂದಿಗಳು, ೮ ಮಾರ್ಗಾಽಕಾರಿಗಳನ್ನು ನೇಮಿಸಲಾಗಿದೆ. ನೇಮಕಗೊಂಡ ಅಽಕಾರಿ, ಸಿಬ್ಬಂದಿಗಳು ತಮಗೆ ವಹಿಸಿಕೊಟ್ಟ ಕರ್ತವ್ಯಗಳನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕು. ಕ್ಷೇತ್ರ ಶಿಕ್ಷಣಾಽಕಾರಿಗಳು ಪರೀಕ್ಷಾ ಕೇಂದ್ರದ ಮುಖ್ಯಸ್ಥರಿಂದ ಸ್ವಚ್ಛತೆ, ಕುಡಿಯುವ ನೀರು, ಶೌಚಾಲಯ ಇತ್ಯಾದಿ ಮೂಲಭೂತ ಸೌಲಭ್ಯಗಳು ಬಗ್ಗೆ ದೃಢೀಕರಿಸಿಕೊಳ್ಳಬೇಕು. ಪರೀಕ್ಷಾ ಕೊಠಡಿಗಳಲ್ಲಿನ ಚಟುವಟಿಕೆಗಳನ್ನು ಗಮನಿಸಲು ತಾಲೂಕಾ ಮಟ್ಟದಲ್ಲಿ ವೆಬ್‌ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ಕ್ಷೇತ್ರ ಶಿಕ್ಷಣಾಽಕಾರಿಗಳು ಪರೀಕ್ಷಾ ಮುಖ್ಯ ಅಽÃಕ್ಷಕರ ಸಭೆ ಕರೆದು ಪರೀಕ್ಷೆಯನ್ನು ಸುವ್ಯವಸ್ಥಿತವಾಗಿ ನಡೆಸಲು ಹಾಗೂ ಅವ್ಯವಹಾರ ನಡೆಯದಂತೆ ಪರೀಕ್ಷಾ ಪಾವಿತ್ರ‍್ಯತೆಯನ್ನು ಕಾಪಾಡಲು ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕು. ಪ್ರತಿಯೊಂದು ವಿದ್ಯಾರ್ಥಿಗಳಿಗೆ ಡೆಸ್ಕ ವ್ಯವಸ್ಥೆ ಕಲ್ಪಿಸಬೇಕು. ಮಾರ್ಗಾಽಕಾರಿಗಳು ಸಮಯಕ್ಕೆ ಸರಿಯಾಗಿ ಪ್ರಶ್ನೆ ಪತ್ರಿಕೆ ತಲುಪಿಸುವ ವ್ಯವಸ್ಥೆ ಆಗಬೇಕು. ಪರೀಕ್ಷಾ ಕೊಠಡಿಯಲ್ಲಿ ಮೊಬೈಲ್ ಸೇರಿದಂತೆ ಇತರೆ ಇಲೇಕ್ಟ್ರಾನಿಕ್ಸ್ ವಸ್ತುಗಳು ತರುವುದನ್ನು ನಿಷೇಽಸಲಾಗಿದೆ. ಅಲ್ಲದೇ ಪರೀಕ್ಷಾ ಕೇಂದ್ರದ ಸುತ್ತ ೨೦೦ ಮೀಟರ್ ಪ್ರದೇಶವನ್ನು ನಿಷೇತ ಪ್ರದೇಶವೆಂದು ಘೋಷಿಸಲಾಗುವು ಎಂದು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಽಕಾರಿ ಪರಶುರಾಮ ಶಿನ್ನಾಳಕರ, ಹೆಚ್ಚುವರಿ ಪೊಲೀಸ್ ವರಿಷ್ಠಾಽಕಾರಿ ಮಹಾಂತೇಶ ಜಿದ್ದಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಿ.ಕೆ.ನಂದನೂರ, ಜಿಲ್ಲಾ ಖಜಾನೆ ಇಲಾಖೆ ಉಪನಿರ್ದೇಶಕ ಕುಂಬಾರ, ಡಿವೈಪಿಸಿಯ ಉಪ ಸಮನ್ವಯಾಽಕಾರಿ ಸಿ.ಆರ್.ಓಣಿ, ಪರೀಕ್ಷಾ ನೋಡಲ್ ಅಽಕಾರಿ ಹಾಲವರ ಸೇರಿದಂತೆ ಕ್ಷೇತ್ರ ಶಿಕ್ಷಣಾಽಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.