ಜಿಲ್ಲೆ

ನಗರ ಸ್ಥಳೀಯ ಸಂಸ್ಥೆ ಉಪಚುನಾವಣೆ ವೇಳಾಪಟ್ಟಿ ಪ್ರಕಟ

ಚಾಮರಾಜನಗರ: ವಿವಿಧ ಕಾರಣಗಳಿಂದ ತೆರವಾಗಿರುವ ಜಿಲ್ಲೆಯ ಯಳಂದೂರು ಪಟ್ಟಣ ಪಂಚಾಯಿತಿಯ 5ನೇ ವಾರ್ಡ್ ಹಾಗೂ ಹನೂರು ಪಟ್ಟಣ ಪಂಚಾಯಿತಿಯ 12ನೇ ವಾರ್ಡ್ ಸದಸ್ಯ ಸ್ಥಾನಕ್ಕೆ ಉಪಚುನಾವಣೆ ನಡೆಸಲು ಚುನಾವಣಾ ಆಯೋಗವು ವೇಳಾಪಟ್ಟಿ ಪ್ರಕಟಿಸಿದೆ.

ನ.4ರಂದು ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಿದ್ದಾರೆ. ನಾಮಪತ್ರ ಸಲ್ಲಿಸಲು ನವೆಂಬರ್ 11 ಕೊನೆಯ ದಿನವಾಗಿದೆ. 12ರಂದು ನಾಮಪತ್ರಗಳನ್ನು ಪರಿಶೀಲಿಸಲಾಗುತ್ತದೆ. ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ನವೆಂಬರ್ 14 ಕಡೆಯ ದಿನವಾಗಿದೆ. ಮತದಾನ ಅವಶ್ಯವಿದ್ದರೆ ನವೆಂಬರ್ 23ರಂದು ಬೆಳಿಗ್ಗೆ 7ರಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಮರು ಮತದಾನ ಅವಶ್ಯವಿದ್ದರೆ ನವೆಂಬರ್ 25ರಂದು ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ.

ಮತಗಳ ಎಣಿಕೆ ಕಾರ್ಯವು ತಾಲೂಕು ಕೇಂದ್ರಗಳಲ್ಲಿ ನವೆಂಬರ್ 26ರಂದು ಬೆಳಿಗ್ಗೆ 8 ಗಂಟೆಯಿಂದ ನಡೆಯಲಿದೆ. ನವೆಂಬರ್ 26ರಂದು ಚುನಾವಣೆ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ. ಉಪಚುನಾವಣೆ ನಡೆಯುವ ನಗರ ಸ್ಥಳೀಯ ಸಂಸ್ಥೆಗಳ ವಾರ್ಡುಗಳ ವ್ಯಾಪ್ತಿಯಲ್ಲಿ ನ.4 ರಿಂದ 26ರವರೆಗೆ ನೀತಿ ಸಂಹಿತೆಯು ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.