ಚಿಕ್ಕಮಗಳೂರು ನಗರಸಭೆ ಅಧ್ಯಕ್ಷರಾಗಿ ಆಯ್ಕೆಗೊಂಡ ಬಿ.ಶೀಲಾ ದಿನೇಶ್ ಅವರಿಗೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನ ಬಣದ ಜಿಲ್ಲಾ ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದರು. ಎಚ್.ಗುರುಮೂರ್ತಿ, ಮಂಜುನಾಥ ತೇರದಾಳ್, ಅನಿಲ್, ಧರ್ಮೇಗೌಡ, ನೀಲಾಂಬಿಕ, ಹರ್ಷ ತೇರದಾಳ್, ಕಿರಣ್, ಕುಮಾರ್, ಶ್ರೀಕಾಂತ್ ಮತ್ತಿತರರಿದ್ದರು. 
ಜಿಲ್ಲೆ

ನಗರದ ಮೂಲಭೂತ ಸೌಲಭ್ಯಕ್ಕೆ ಹೆಚ್ಚಿನ ಆದ್ಯತೆ ನೀಡಿ

ಚಿಕ್ಕಮಗಳೂರು: ನಗರಸಭೆ ಅಧ್ಯಕ್ಷರಾಗಿ ಆಯ್ಕೆಗೊಂಡ ಬಿ.ಶೀಲಾ ದಿನೇಶ್ ಅವರಿಗೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನ ಬಣದ ಜಿಲ್ಲಾ ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಕರವೇ ಜಿಲ್ಲಾಧ್ಯಕ್ಷ ಎಚ್.ಗುರುಮೂರ್ತಿ, ನಗರದ ರಸ್ತೆಗಳು ಗುಂಡಿಮಯವಾಗಿರುವ ಕಾರಣ ವಾಹನ ಸವಾರರು ಮತ್ತು ಪಾದಚಾರಿಗಳಿಗೆ ಬಹಳಷ್ಟು ತೊಂದರೆಯಾಗುತ್ತಿದೆ. ಅಲ್ಲದೇ ವಾರ್ಡ್ಗಳಲ್ಲಿ ಬೀದಿನಾಯಿಗಳ ಹಾವಳಿ ವಿಪರೀತವಾದ ಕಾರಣ ವೃದ್ದರು, ಮಕ್ಕಳು ಆತಂಕದಲ್ಲೇ ಓಡಾಡುವಂತಾಗಿದೆ. ಕೂಡಲೇ ಸಾರ್ವಜನಿಕರಿಗೆ ಮೂಲಭೂತ ಸೌಕರ್ಯಗಳ ಕೊರತೆ ಎದುರಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಕರವೇ ಗೌರವಾಧ್ಯಕ್ಷ ಮಂಜುನಾಥ್ ತೆರದಾಳ್, ತಾಲೂಕು ಅಧ್ಯಕ್ಷ ಅನಿಲ್, ನಗರಾಧ್ಯಕ್ಷ ಧರ್ಮೇಗೌಡ, ಅಜ್ಜಂಪುರ ಮಹಿಳಾ ಅಧ್ಯಕ್ಷೆ ನೀಲಾಂಬಿಕಾ, ಮುಖಂಡರಾದ ಹರ್ಷ ತೆರದಾಳ್, ಕಿರಣ್, ಕುಮಾರ್, ಶ್ರೀಕಾಂತ್ ಮತ್ತಿತರರಿದ್ದರು.