ಜಿಲ್ಲೆ

ನಗರದಲ್ಲಿ ಕಾಂಗ್ರೆಸ್ ಮುಖಂಡರಿಂದ ಅಭ್ಯರ್ಥಿ ಪರ ಪ್ರಚಾರ

ಹಾಸನ: ನಗರದ ಸಾಲಗಾಮೆ ರಸ್ತೆ ಬಳಿ ಇರುವ ಶ್ರೀ ಸರಸ್ಪತಿ ದೇವಾಲಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಬುಧವಾರ ವಿಶೇಷ ಪೂಜೆ ಸಲ್ಲಿಸಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಪರ ಪ್ರಚಾರವನ್ನು ಆರಂಭಿಸಿದರು.
ನಂತರ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಈ. ಲಕ್ಷ್ಮಣ್ ಸುದ್ದಿಗಾರರೊಂದಿಗೆ ಮಾತನಾಡಿ, ನುಡಿದಂತೆ ನಡೆದ ಸರ್ಕಾರವಿದ್ದರೇ ಅದು ಕಾಂಗ್ರೆಸ್ ಸರ್ಕಾರ. ರಾಜ್ಯದಂತೆ ಕೇಂದ್ರದಲ್ಲೂ ಕೂಡ ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದು, ಜಾತಿ, ಮತ ಬೇಧವಿಲದೇ ಎಲ್ಲರೂ ಸಮಾನರು ಎಂಬಂತೆ ಸರ್ಕಾರ ಇದ್ದರೆ ಅದು ಕಾಂಗ್ರೆಸ್. ಈ ಬಾರಿ ನಮ್ಮ ಅಭ್ಯರ್ಥಿ ಶ್ರೇಯಸ್ ಪಟೇಲ್ ಅವರಿಗೆ ಹೆಚ್ಚಿನ ಮತಗಳನ್ನು ನೀಡುವಂತೆ ಹಾಸನ ಜಿಲ್ಲೆಯ ಎಲ್ಲಾ ಮತದಾರರ ಬಂಧುಗಳಲ್ಲಿ ಪ್ರಾರ್ಥನೆ ಮಾಡುತ್ತೇವೆ ಎಂದರು.
ಮುಖಂಡ ಬನವಾಸೆ ರಂಗಸ್ವಾಮಿ ಮಾತನಾಡಿ, ಕಾಂಗ್ರೆಸ್ ಪಕ್ಷದ ಎಲ್ಲ ಮುಖಂಡರು ಪಕ್ಷದ ಅಭ್ಯರ್ಥಿ ಪರ ಪ್ರಚಾರ ಮಾಡುತ್ತಿದ್ದೇವೆ. ದಿನೇದಿನೆ ಸಾಗರದ ರೀತಿ ಪ್ರಚಾರದಲ್ಲಿ ಜನರು, ಕಾರ್ಯಕರ್ತರು ಪಾಲ್ಗೊಳ್ಳುತ್ತಿದ್ದಾರೆ. ಎರಡು ಲಕ್ಷ ಲೀಡ್‌ನಲ್ಲಿ ಶ್ರೇಯಸ್ ಪಟೇಲ್ ಗೆಲುವು ಸಾಧಿಸುವುದರಲ್ಲಿ ಯಾವ ಸಂಶಯವಿಲ್ಲ ಎಂದು ಭವಿಷ್ಯ ನುಡಿದರು.
ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ತಾರಾಚಂದನ್ ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಅವರ ಪರವಾಗಿ ನಾವೆಲ್ಲರೂ ಪ್ರಚಾರಕ್ಕೆ ಚಾಲನೆ ಕೊಟ್ಟಿದ್ದೇವೆ. ನಮ್ಮದು ಜನಪರ, ಬಡವರ ಪಕ್ಷವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ನಾವೆಲ್ಲರೂ ಶ್ರಮಿಸೋಣ ಎಂದರು.
ಪ್ರಚಾರ ಸಮಿತಿ ಅಧ್ಯಕ್ಷ ದೇವರಾಜೇಗೌಡ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಕೇಂದ್ರದ ಭರವಸೆ ಕಾರ್ಡ್ ಬಿಡುಗಡೆ ಮಾಡಲಾಗಿದೆ. ಈ ಕಾರ್ಡ್‌ನಲ್ಲಿ ಐದು ಭರವಸೆಯನ್ನು ಬಿಡುಗಡೆ ಮಾಡಲಾಗಿದೆ. ಮುಖ್ಯಮಂತ್ರಿ ಮತ್ತು ರಾಜ್ಯಾಧ್ಯಕ್ಷರು ಸಹಿ ಮಾಡಿದ್ದು, ಇನ್ನು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರು ಸಹಿ ಮಾಡಿ ಈ ಕಾರ್ಡ್ ಬಿಡುಗಡೆ ಮಾಡಿದ್ದಾರೆ ಎಂದು ತಿಳಿಸಿದರು.
ಇದೆ ವೇಳೆ ಕಾಂಗ್ರೆಸ್ ಮುಖಂಡರಾದ ಎಚ್.ಕೆ. ಜವರೇಗೌಡ, ಬಿ.ಕೆ. ಮಂಜುನಾಥ್, ಮೋಹನ್ ಕುಮಾರ್, ಜಮೀಲಾ, ಅಬ್ದುಲ್ ಖಯಿಂ, ಕಬ್ಬಳ್ಳಿ ರಾಮಚಂದ್ರ, ಶಂಕರರಾಜು, ನವೀನ್ ಇತರರು ಉಪಸ್ಥಿತರಿದ್ದರು.