ಜಿಲ್ಲೆ

ನಗರದಲ್ಲಿ ಡೆಂಘೆ ಪ್ರಕರಣ ಹೆಚ್ಚಳ ಶಾಸಕ ಎಚ್.ಪಿ.ಸ್ವರೂಪ ಅಧಿಕಾರಿಗಳ ಸಭೆ

ಹಾಸನ: ನಗರದಲ್ಲಿ ಡೆಂೆ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ, ನಗರಸಭೆ ಮತ್ತು ಇನ್ನಿತರೆ ಇಲಾಖೆಗಳ ಸಹಕಾರದಿಂದ ಡೆಂೆ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಎಲ್ಲಾರ ಸಹಕಾರ ಅತ್ಯಗತ್ಯವಾಗಿದೆ ಎಂದು ಶಾಸಕ ಎಚ್.ಪಿ.ಸ್ವರೂಪ ಪ್ರಕಾಶತಿಳಿಸಿದರು.
ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಹಾಸನ ನಗರದಲ್ಲೇ 58 ಪ್ರಕರಣಗಳು ದಾಖಲಾಗಿದ್ದು, ರಾಜ್ಯದಲ್ಲಿ ಜಿಲ್ಲೆ 8ನೇ ಸ್ಥಾನದಲ್ಲಿದೆ. ಆದ್ದರಿಂದ ಎಲ್ಲಾ ಅಧಿಕಾರಿಗಳೊಂದಿಗೆ ಸಭೆ ನೆಡೆಸಿ ಮುಂಜಾಗ್ರತ ಕ್ರಮಗಳು ಮತ್ತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಡೆಂೆ ರೋಗ ನಿರ್ಮೂಲನೆಗೆ ಆಶಾ ಕಾರ್ಯಕರ್ತರೊಂದಿಗೆ ಲಾರ್ವ ಪತ್ತೆ ಮತ್ತು ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಈ ನಿಟ್ಟಿನಲ್ಲಿ ಜು.09 ಮಂಗಳವಾರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನ ಸಭೆಯನ್ನು ಹಮ್ಮಿಕೊಂಡಿದ್ದು, ಅಲ್ಲಿ ತಾಲೂಕಿನ ಎಲ್ಲಾ ಪಿಡಿಒಗಳಿಗೂ ಕಟ್ಟುನಿಟ್ಟಿನ ಸೂಚನೆ ನೀಡಲಾಗುವುದು ಎಂದರು.
ಸಭೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಮಾತನಾಡಿ, ನಗರ ಪ್ರದೇಶದಲ್ಲಿ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಸ್ವಚ್ಛತೆ ಇಲ್ಲದೆ ಇರುವುದು, ಸಾರ್ವಜನಿಕರಿಗೆ ಅರಿವು ಮೂಡಿಸಲು ಮನೆ ಮನೆಗೆ ತೆರಳಿದ ಸಂದರ್ಭದಲ್ಲಿ ಸರಿಯಾದ ರೀತಿ ಸಹಕಾರ ಮತ್ತು ಸ್ಪಂದನೆ ನೀಡುತ್ತಿಲ್ಲ ಮತ್ತು ಟೀ ಅಂಗಡಿ, ತೆಂಗಿನಕಾಯಿ ಮತ್ತು ಪಂಚರ್ ಅಂಗಡಿಗಳಲ್ಲಿ ಸ್ವಚ್ಛತೆ ಇಲ್ಲದಿರುವುದು, ತ್ಯಾಜ್ಯ ವಸ್ತುಗಳನ್ನ ಬಿಸಾಡುವ ಮೂಲಕ ಅಲ್ಲಿ ನೀರು ಸಂಗ್ರಹಣವಾಗಿ ಹೆಚ್ಚು ಸೊಳ್ಳೆಗಳು ಉತ್ಪತ್ತಿಯಾಗುತ್ತಿವೆ. ತಕ್ಷಣವೇ ಸಂಬಂಧಪಟ್ಟವರು ಇಂತಹ ಅಂಗಡಿಗಳ ವಿರುದ್ಧ ದಂಡ ವಿಧಿಸುವ ಮೂಲಕ ಅವರಿಗೆ ಎಚ್ಚರಿಕೆ ನೀಡಬೇಕು ಎಂದು ಹೇಳಿದರು.
ನಗರಸಭೆಗೆ ಇತ್ತೀಚೆಗೆ 25 ಹಳ್ಳಿಗಳು ಸೇರ್ಪಡೆಯಾಗಿದ್ದು, ಆ ಹಳ್ಳಿಗಳಲ್ಲಿ ಸ್ವಚ್ಛತೆ ಕಾರ್ಯವನ್ನ ನಗರಸಭೆಯಿಂದ ಕೈಗೊಳ್ಳುತ್ತಿಲ್ಲ, ಇದರಿಂದ ಸಾರ್ವಜನಿಕರಿಗೆ ಸಾಕಷ್ಟು ದೂರುಗಳು ಕೇಳಿ ಬರುತ್ತಿವೆ. ಪ್ರತಿ ಗ್ರಾಮಗಳಿಗೂ ಕೂಡ ಮೊದಲನೇ ಶುಕ್ರವಾರ ಮತ್ತು ಮೂರನೇ ಶುಕ್ರವಾರ ಆರೋಗ್ಯ ಇಲಾಖೆಯಿಂದ ಆಶಾ ಕಾರ್ಯಕರ್ತರು ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಹೇಳಿದರು.
ನಂತರ ಶಾಸಕರು ಮಾತನಾಡಿ, ನಗರಸಭೆಯಲ್ಲಿ ಸಿಬ್ಬಂದಿಗಳ ಕೊರತೆ ಇದೆ. ಇದರ ಜೊತೆಗೆ 25 ಗ್ರಾಮಗಳು ಸೇರ್ಪಡೆಯಾಗಿದ್ದು, ಈ ಬಗ್ಗೆ ಸರ್ಕಾರದೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ಮುನ್ನೆಚ್ಚರಿಕೆಗಾಗಿ ಆರೋಗ್ಯ ಇಲಾಖೆಯೊಂದಿಗೆ ಖಾಸಗಿ ಮತ್ತು ಸರ್ಕಾರಿ ನಸಿರ್ಂಗ್ ಕಾಲೇಜು ವಿದ್ಯಾರ್ಥಿನಿಯರು ಸಹಕಾರದಿಂದ ಸಾರ್ವಜನಿಕರಿಗೆ ಅರಿವು ಮೂಡಿಸುವುದು ಮತ್ತು ಮನೆ ಮನೆ ಸಮೀಕ್ಷೆಗೆ ಅವರನ್ನ ಬಳಸಿಕೊಳ್ಳುವಂತೆ ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶಿವಸ್ವಾಮಿ ಮಾತನಾಡಿ, ಜಿಲ್ಲೆಯಲ್ಲಿ ಪ್ರಸ್ತುತ 224 ಡೆಂೆ ಪ್ರಕರಣಗಳು ದಾಖಲಾಗಿದ್ದು, ಅವರಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಇತ್ತೀಚೆಗೆ ಮೃತ ಮಕ್ಕಳ ಸಾವಿನ ವರದಿಯನ್ನು ಸರ್ಕಾರಕ್ಕೆ ಕಳುಹಿಸಲಾಗಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಯಾವುದೇ ರೀತಿ ವೈದ್ಯರು, ಔಷಧಿ, ಬೆಡ್‌ಗಳ ಕೊರತೆ ಇಲ್ಲ. ಆದರೆ, ರೋಗವನ್ನು ನಿಯಂತ್ರಣಕ್ಕೆ ತರಲು ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದೆ.ಪ್ರತಿಯೊಬ್ಬರ ಮನೆಯ ಸುತ್ತ ಸ್ವಚ್ಛತೆಯಿಂದ ಕಾಪಾಡಿಕೊಳ್ಳುವುದು ಉತ್ತಮ ಎಂದು ಹೇಳಿದರು.
ಸಭೆಯಲ್ಲಿ ನಗರಸಭೆ ಆಯುಕ್ತ ಯೋಗಾನಂದ, ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ವಿಜಯ್ ಗೊರೂರು ಸೇರಿದಂತೆ ಅಧಿಕಾರಿಗಳು ಮತ್ತು ವೈದ್ಯರು ಹಾಜರಿದ್ದರು