ರಾಯಚೂರು: ನಗರದ ಕೃಷಿ ವಿಜ್ಞಾನಗಳ ವಿವಿಯ ಪ್ರೇಕ್ಷಾಗೃಹದಲ್ಲಿ ಸೆ.2 ಮತ್ತು 3ರಂದು ರಾಜ್ಯದ ಮಟ್ಟದ ಕೈಗಾರಿಕಾ ಸಮಾವೇಶ ಆಯೋಜಿಸಲಾಗಿದ್ದು, ಎರಡು ದಿನಗಳ ಕಾಲ ಕೈಗಾರಿಕೆ ಬೆಳವಣಿಗೆ ಹಾಗೂ ಸಮಸ್ಯೆಗಳ ಕುರಿತು ಚರ್ಚಿಸಲಾಗುವುದು ಎಂದು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಸಂಸ್ಥೆ ಅಧ್ಯಕ್ಷ ಬಿ.ವಿ.ಗೋಪಾಲರೆಡ್ಡಿ ತಿಳಿಸಿದರು.
ಸ್ಥಳೀಯ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಭಾನುವಾರ ಮಾತನಾಡಿ, ರಾಜ್ಯದ ಎಲ್ಲ ಜಿಲ್ಲೆಗಳಲ್ಲಿನ ಕೈಗಾರಿಕೆ ಸಮಸ್ಯೆಗಳ ಬಗ್ಗೆ ಪರಿಹಾರೋಪಾಯ ಕಂಡು ಹಿಡಿಯುವ ನಿಟ್ಟಿನಲ್ಲಿ ಹಾಗೂ ಸರ್ಕಾರದ ಗಮನ ಸೆಳೆಯುವ ಬಗ್ಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು.
ಸೆ.2ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮೇಳನವನ್ನು ಉದ್ಘಾಟಿಸಲಿದ್ದು, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಸಣ್ಣ ಕೈಗಾರಿಕಾ ಸಚಿವ ಶರಣಬಸಪ್ಪ ದರ್ಶನಾಪುರ, ಕೃಷಿ ಸಚಿವ ಚಲುವರಾಯ ಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್, ಸಚಿವರಾದ ಎನ್.ಎಸ್.ಬೋಸರಾಜು, ಶಿವಾನಂದ ಪಾಟೀಲ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಸೆ.3ರಂದು ನಡೆಯುವ ಕಾರ್ಯಕ್ರಮಗಳಲ್ಲಿ ಕೇಂದ್ರ ಸಚಿವರಾದ ಪ್ರಹ್ಲಾದ ಜೋಷಿ, ಭಗವಂತ ಖುಬಾ, ಕೈಗಾರಿಕಾ ಇಲಾಖೆ ಕಾರ್ಯದರ್ಶಿ ಸೆಲ್ವಕುಮಾರ, ಕೌಶಲ್ಯಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಅಶ್ವಿನಿಗೌಡ ಪಾಲ್ಗೊಳ್ಳಲಿದ್ದಾರೆ. ಸಮ್ಮೇಳನದಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಿಂದ 500 ರಿಂದ 600 ಕೈಗಾರಿಕೋದ್ಯಮಿಗಳು ಭಾಗವಹಿಸಲಿದ್ದಾರೆ ಎಂದು ಬಿ.ವಿ.ಗೋಪಾಲರೆಡ್ಡಿ ತಿಳಿಸಿದರು.
ವಾಣಿಜ್ಯೋದ್ಯಮ ಸಂಘದ ನಿಕಟಪೂರ್ವ ಅಧ್ಯಕ್ಷ ತ್ರಿವಿಕ್ರಮ ಜೋಷಿ ಮಾತನಾಡಿ, ಎರಡು ದಿನಗಳ ಸಮ್ಮೇಳನದಲ್ಲಿ ಕೈಗಾರಿಕೆಗಳಿಗೆ ಸಂಬಂಸಿದ 100 ಮಳಿಗೆಗಳನ್ನು ಹಾಕಲಾಗುತ್ತಿದ್ದು, ಜಿಲ್ಲೆಯ ವ್ಯಾಪಾರಸ್ಥರು, ಕೈಗಾರಿಕೋದ್ಯಮಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ವಾಣಿಜ್ಯೋದ್ಯಮ ಸಂಘದ ಅಧ್ಯಕ್ಷ ಎಸ್.ಕಮಲಕುಮಾರ ಜೈನ್, ಪದಾಕಾರಿಗಳಾದ ಮಲ್ಲಿಕಾರ್ಜುನ ದೋತರಬಂಡಿ, ಜಂಬಣ್ಣ ಯಕ್ಲಾಸಪುರ, ಜಗದೀಶ ಗುಪ್ತಾ, ನಾಗನಗೌಡ ಹರವಿ, ಸಿದ್ದನಗೌಡ ಗಾರಲದಿನ್ನಿ, ಎ್ಕೆಸಿಸಿಐ ಪದಾಕಾರಿಗಳಾದ ದಾನಪ್ಪಗೌಡ, ರಾಜಪುರೋಹಿತ, ಮಧುಸೂಧನ್ ಉಪಸ್ಥಿತರಿದ್ದರು.