ಜಿಲ್ಲೆ

ನಗರದಲ್ಲಿನ ಸಮಸ್ಯೆ ಬಗ್ಗೆ ಕ್ರಮವಹಿಸುವೆ

ಬಳ್ಳಾರಿ : ನಗರದಲ್ಲಿ ನ ಒಳಚರಂಡಿ ಸೇರಿದಂತೆ ಹಲವು ಸಮಸ್ಯೆಗಳಿದ್ದು, ಅವುಗಳ ದುರಸ್ತಿ ಕಾರ್ಯಕ್ಕೆ ಮುಂದಾಗುವೆ ಎಂದು ನೂತನ ಮೇಯರ್ ಮುಲ್ಲಂಗಿ ನಂದೀಶ್ ಹೇಳಿದರು.
ಇಲ್ಲಿನ ಮಹಾನಗರ ಪಾಲಿಕೆಯ ಕಚೇರಿಯಲ್ಲಿ ಸೋಮವಾರ ನೂತನ ಮೇಯರ್ ಮುಲ್ಲಂಗಿ ನಂದೀಶ್, ಉಪಮೇಯರ್ ಡಿ.ಸುಕುಂ ಅಧಿಕಾರ ಸ್ವೀಕರಿಸಿ ಬಳಿಕ ಮಾತನಾಡಿದರು. ಇತ್ತೀಚೆಗೆ ಕಳೆದ ಕೆಲ ದಿನಗಳ ಹಿಂದೆ ಸುರಿದ ಮಳೆಗೆ ನಗರವಾಸಿಗಳು ಸಂಕಷ್ಟ ಪಡುವಂತೆಯಾಯಿತು. ಒಳ ಚರಂಡಿ, ರಾಜಕಾಲುವೆಗಳ ದುರಸ್ತಿ ಕಾರ್ಯ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಸಭೆ ಕರೆದು ಚರ್ಚಿಸಿ ಸಮಸ್ಯೆಗೆ ಬಗೆಹರಿಸಲಾಗುವುದು. ನಗರದಲ್ಲಿ ಕುಡಿಯುವ ನೀರಿನ ಕೊರತೆಯಿಲ್ಲ. ಆದರೆ, ನೀರು ಸರಬರಾಜು ಸೇರಿದಂತೆ ಇನ್ನಿತರೆ ಕಾರಣಗಳಿಂದ ತೊಂದರೆ ಆಗುತ್ತಿದ್ದು, ಸಮಸ್ಯೆಯನ್ನು ಸರಿಪಡಿಸಲಾಗುವುದು ಎಂದು ಹೇಳಿದರು.
ಮೇಯರ್ ಆಗಿ ಅಧಿಕಾರ ಸ್ವೀಕಾರ ಬಳಿಕ ಅವರು ತಮ್ಮ ಕಚೇರಿಯಲ್ಲಿ ಬೆಳಗ್ಗೆ ಪೂಜೆ ಸಲ್ಲಿಸಿದರು. ಪಾಲಿಕೆ ಆಯುಕ್ತ ಜಿ.ಖಲೀಲ್ ಸಾಬ್, ಸೇರಿದಂತೆ ಪಕ್ಷದ ಹಿರಿಯ ಮುಖಂಡರು, ಕುಟುಂಬ ಸದಸ್ಯರು, ಸ್ನೇಹಿತರ ಮೇಯರ್-ಉಪಮೇರ್‌ಗೆ ಪುಷ್ಪಗುಚ್ಛ ನೀಡಿ ಶುಭ ಕೋರಿದರು.