ಜಿಲ್ಲೆ

ನಗರಸಭೆ ಆರೋಗ್ಯ ಶಾಖೆ ವಿರುದ್ಧ ಪ್ರತಿಭಟನೆ

ಚಾಮರಾಜನಗರ: ನಗರಸಭೆಯ ಆರೋಗ್ಯ ಶಾಖೆಯಲ್ಲಿ ಜನನ-ಮರಣ ಪತ್ರ ನೀಡುವುದನ್ನು ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿ ಗಾಳೀಪುರ ಬಡಾವಣೆಯ ನಿವಾಸಿಗಳು ಬುಧವಾರ ಪ್ರತಿಭಟನೆ ನಡೆಸಿದರು.

ನಗರದ ನಗರಸಭೆ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ಕೆಲಕಾಲ ಪ್ರತಿಭಟನೆ ನಡೆಸಿದರು. ನಗರಸಭೆಯ ಆರೋಗ್ಯ ಶಾಖೆ ಮತ್ತು ಆರೋಗ್ಯ ಅಧಿಕಾರಿಗಳ ವಿರುದ್ಧ ೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ಎಂ.ಮಹೇಶ್ ಮಾತನಾಡಿ, ನಗರಸಭೆ ಆರೋಗ್ಯ ಶಾಖೆ ವತಿಯಿಂದ ಜನನ ಮತ್ತು ಮರಣ ಪತ್ರಗಳನ್ನು ನಿಗದಿತ ಶುಲ್ಕವನ್ನು ಕಟ್ಟಿಸಿಕೊಂಡು, ನಿಗದಿತ ಅವಧಿಯಲ್ಲಿ ವಿತರಣೆ ಮಾಡಬೇಕು. ಆದರೇ ಒಬ್ಬ ವ್ಯಕ್ತಿ ಜನನ ಮತ್ತು ಮರಣ ಪ್ರಮಾಣ ಪತ್ರಗಳಿಗೆ ಅರ್ಜಿ ಸಲ್ಲಿಸಿದರೇ, ಸುಮಾರು 2 ತಿಂಗಳು ಕಾಲ ವಿಳಂಬ ಮಾಡುತ್ತಿದ್ದಾರೆ ಎಂದು ದೂರಿದರು.

ಗಾಳಿಪುರ ಬಡಾವಣೆಯ ನಿವಾಸಿಯೊಬ್ಬರು ಮರಣ ಪ್ರಮಾಣ ಪತ್ರ ಕೋರಿ ಸುಮಾರು 20 ದಿನಗಳ ಹಿಂದೆ ಅರ್ಜಿ ಸಲ್ಲಿಸಿದ್ದಾರೆ. ಆದರೇ ಈ ವರೆಗೂ ಅರ್ಜಿಯನ್ನು ವಿಲೇವಾರಿ ಮಾಡಿಲ್ಲ. ಅಂದಿನಿಂದಲೂ ಪ್ರತಿನಿತ್ಯವೂ ನಗರಸಭೆಗೆ ಆ ವ್ಯಕ್ತಿ ಬಂದು ಅಳೆದಾಡುತ್ತಿದ್ದು, ಈಗ ಬಂದು ಕೇಳಿದರೇ ನೋಟರಿ ತಂದುಕೊಡಿ ಎಂದು ಕೇಳುತ್ತಿದ್ದಾರೆ. ಆರೋಗ್ಯ ಶಾಖೆಯ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆ ಇದಕ್ಕೆ ಕಾರಣವಾಗಿದೆ ಎಂದು ದೂರಿದರು.

ಪ್ರತಿಭಟನೆ ಸ್ಥಳಕ್ಕೆ ಪೌರಾಯುಕ್ತ ರಾಮದಾಸ್ ಭೇಟಿ ನೀಡಿ, ಸಮಸ್ಯೆ ಬಗೆಹರಿಸುತ್ತೇವೆ ಎಂದು ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.

ಪ್ರತಿಭಟನೆಯಲ್ಲಿ ಎಸ್‌ಡಿಪಿಐ ಪಕ್ಷದ ಪ್ರಧಾನ ಕಾರ್ಯದರ್ಶಿ ನಸ್ರುಲ್ಲಾ, ರಾಜೇಂದ್ರ, ಮಹದೇವಪ್ರಸಾದ್ ಹಾಗೂ ಇತರರು ಹಾಜರಿದ್ದರು.