ಜಿಲ್ಲೆ

ನಗರಸಭೆ ವಾಹನದಲ್ಲಿ ಘನತ್ಯಾಜ್ಯ ವಿಲೇವಾರಿ

ಚಿತ್ರದುರ್ಗ: ನಗರಸಭೆ ವಾಹನದಲ್ಲಿ ಘನತ್ಯಾಜ್ಯ ವಿಲೇವಾರಿ ಮಾಡುವಂತೆ ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ನಾಗರಿಕರಿಗೆ ಮನವಿ ಮಾಡಿದರು.
ನೆಹರು ನಗರ ಆರೋಗ್ಯ ಕೇಂದ್ರ ವ್ಯಾಪ್ತಿಯ ಚೇಳುಗುಡ್ಡ ಮತ್ತಿತರ ಡೆಂೆ ಹಾಟ್‌ಸ್ಪಾಟ್ ಎಂದು ಗುರುತಿಸಿಸಿರುವ ಸ್ಥಳಗಳಲ್ಲಿ ಆರೋಗ್ಯ ಇಲಾಖೆ, ನಗರಸಭೆ ಸಹಯೋಗದೊಂದಿಗೆ ಗುರುವಾರ ಬೆಳಗ್ಗೆ ಮನೆ, ಮನೆ ಭೇಟಿ, ಸೊಳ್ಳೆ ಉತ್ಪತ್ತಿ ತಾಣ ನಾಶ, ಜ್ವರ ಸಮೀಕ್ಷೆ ಕಾರ್ಯಕ್ಕೆ 10 ತಂಡಗಳ ರಚನೆ, ಗುಂಪು ಸಭೆ, ಕರಪತ್ರ ಹಾಗೂ ಬೇವಿನ ಎಣ್ಣೆ ಬಾಟಲ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಮನೆ ಸುತ್ತ ಎಲ್ಲೂ ನೀರು ನಿಲ್ಲದಂತೆ ನೋಡಿಕೊಳ್ಳ ಬೇಕು. ಕಸವನ್ನು ನಗರಸಭೆ ವಾಹನಗಳಲ್ಲಿ ವಿಲೇವಾರಿ ಮಾಡುವ ಮೂಲಕ ಡೆಂೆ ನಿಯಂತ್ರಣಕ್ಕೆ ನಾಗರಿಕರು ಕೈ ಜೋಡಿಸಬೇಕು ಎಂದು ಕೋರಿದರು.
ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣಾಧಿಕಾರಿ ಡಾ.ಎನ್.ಕಾ ಶಿ, ತಾಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಮಾತನಾಡಿದರು.
ಜಿಲ್ಲಾ ಕೀಟ ಶಾಸ್ತ್ರಜ್ಞೆ ನಂದಿನಿ ಕಡಿ, ಆರೋಗ್ಯ ಶಿಕ್ಷಣಾಧಿಕಾರಿಗಳಾ ದ ಎನ್.ಎಸ್.ಮಂಜುನಾಥ, ಬಿ.ಮೂಗಪ್ಪ, ಬಿ.ಜಾನಕಿ ಇತರರಿದ್ದರು.