ಹಾಸನ: ನಗರಸಭೆ ವ್ಯಾಪ್ತಿಗೆ ಸೇರಿದಂತಹ 25 ಹಳ್ಳಿಗಳ ಖಾತೆ ಮಾಡುವ ಸಂಬಂಧ ನಗರಸಭೆ ನಿರ್ಲಕ್ಷ ವಹಿಸಿತ್ತು. ಈ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡದ್ದರಿಂದ, ಅಧಿಕಾರಿಗಳು ಭರವಸೆ ನೀಡಿದ್ದಾರೆ ಆದ್ದರಿಂದ ಪ್ರತಿಭಟನೆಯನ್ನು ಹಿಂಪಡೆಯಲಾಗಿದೆ ಎಂದು ತಮ್ಲಾಪುರ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಗಣೇಶ್ ತಿಳಿಸಿದರು.
ನಗರಸಭೆಯಿಂದ ಖಾತೆ ಬದಲಾವಣೆ ಸೇರಿಂದತೆ ಹಲವು ಸಮಸ್ಯೆಗಳಾಗುತ್ತಿದ್ದವು ಇದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆ ಉಂಟಾಗುತ್ತಿತ್ತು. ಈ ಹಿನ್ನಲೆಯಲ್ಲಿ ಅಧಿಕಾರಿಗಳಿಗೆ ಮನವಿ ಮಾಡಿದರು ಕೂಡ ಯಾವುದೇ ರೀತಿ ಸ್ಪಂದಿಸಲಿಲ್ಲ. ಆದ್ದರಿಂದ ಇತ್ತೀಚಿಗೆ ಸುದ್ದಿಗೋಷ್ಠಿ ನಡೆಸಿ 25 ಗ್ರಾಮದ ಹಳ್ಳಿಯ ಸಾರ್ವಜನಿಕರು ಮತ್ತು ಸಂಘ ಸಂಸ್ಥೆ ಮುಖಂಡರೊಂದಿಗೆ ಬೃಹತ್ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ದೆವು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಈ ಹಿನ್ನಲೆಯಲ್ಲಿ ್ಲ ನಗರಸಭೆ ಆಯುಕ್ತರು ನಮ್ಮನ್ನ ಕರೆದು ಮಾತನಾಡಿ ಶೀಘ್ರದಲ್ಲೇ ಜನರ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದು ಭರವಸೇ ನೀಡಿರುವುದ್ದರಿಂದ ಪ್ರತಿಭಟನೆಯನ್ನು ಹಿಂಪಡೆಯಲಾಗಿದೆ. ಒಂದು ವೇಳೆ ನಮ್ಮ ಸಮಸ್ಯೆ ಈಡೇರಿದಿದ್ದರೆ ಮತ್ತೆ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದೆಂದು ಎಚ್ಚರಿಸಿದರು
ಹರಳಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ರಘು ಹಾಜರಿದ್ದರು