ಜಿಲ್ಲೆ

ನಟ ಉಪೇಂದ್ರ ಬಂಧನಕ್ಕೆ ಆಗ್ರಹ

ಅರಕಲಗೂಡು: ದಲಿತ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಚಲನಚಿತ್ರ ನಟ ಉಪೇಂದ್ರ ಅವರನ್ನು ಕೂಡಲೇ ಬಂಸಬೇಕು ಎಂದು ತಾಲೂಕು ಛಲವಾದಿ ಮಹಾಸಭಾ ಅಧ್ಯಕ್ಷ ಎ.ವಿ. ಪ್ಲಥ್ವಿರಾಜ್ ಆಗ್ರಹಿಸಿದ್ದಾರೆ.


ಟ್ವಿಟರ್ ಹಾಗೂ ಸಾಮಾಜಿಕ ಜಾಲತಾಣ ಮೂಲಕ ದಲಿತರ ಕುರಿತು ಅವಹೇಳನಕಾರಿಯಾಗಿ ಹೇಳಿಕೆ ನೀಡಿರುವ ಉಪೇಂದ್ರ ಅವರು ಬಹಿರಂಗವಾಗಿ ಸಮುದಾಯದ ಕ್ಷಮೆ ಕೇಳಬೇಕು. ಸರ್ಕಾರ ಇದರ ಬಗ್ಗೆ ಕ್ರಮ ವಹಿಸದಿದ್ದರೆ ಹೋರಾಟ ಹಮ್ಮಿಕೊಳ್ಳುವುದಾಗಿ ಹೇಳಿಕೆಯಲ್ಲಿ ಎಚ್ಚರಿಸಿದ್ದಾರೆ.