ಕೊಳ್ಳೇಗಾಲ: ದಲಿತ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಚಲನಚಿತ್ರ ನಟ ಉಪೇಂದ್ರ ಅವರನ್ನು ಬಂಧಿಸಬೇಕು. ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ತಾಲೂಕು ಆದಿ ದ್ರಾವಿಡ ಮೂಲ ನಿವಾಸಿಗಳ ಹೋರಾಟ ಸಮಿತಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಿತು.
ಪಟ್ಟಣದ ಎಂಜಿಎಸ್‌ವಿ ಜೂನಿಯರ್ ಕಾಲೇಜಿನಲ್ಲಿ ಬೆಳಗ್ಗೆ ಸಮಾವೇಶಗೊಂಡ ನೂರಾರು ಪ್ರತಿಭಟನಾಕಾರರು ತಾಲೂಕು ಕಚೇರಿವರೆಗೆ ಮೆರವಣಿಗೆ ನಡೆಸಿದರು. ಬಳಿಕ ತಾಲೂಕು ಕಚೇರಿ ಆವರಣದಲ್ಲಿ ಉಪೇಂದ್ರ ಹಾಗೂ ಎಸ್.ಮಲ್ಲಿಕಾರ್ಜುನ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಆದಿ ದ್ರಾವಿಡ.ಹೋರಾಟ ಸಮಿತಿ ಸಂಚಾಲಕ ಅಣಗಳ್ಳಿ ಬಸವರಾಜು ಮಾತನಾಡಿ, ನಟ ಉಪೇಂದ್ರ ಅವರ ವಿರುದ್ಧ ದಾಖಲಿಸಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಕೂಡಲೇ ರಾಜ್ಯ ಸರ್ಕಾರ ಮಧ್ಯ ಪ್ರವೇಶಿಸಿ ತಡೆಯಾಜ್ಞೆ ರಛ್ಛಛ್ಠ ಪಡಿಸಲು ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಬೇಕೆಂದು ಒತ್ತಾಯಿಸಿದರು. ಅಂತೆಯೇ ದಲಿತರ ಅವಹೇಳನ ಮಾಡಿರುವ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.
ಈ ಸಮಿತಿಯು ಚಳವಳಿಯನ್ನು ಇಲ್ಲಿಗೆ ನಿಲ್ಲಿಸುವುದಿಲ್ಲ. ನಮ್ಮ ತಾಲೂಕಿನ ಪ್ರತಿ ಗ್ರಾಮದಲ್ಲಿ ನಮ್ಮ ಸಮುದಾಯದ ಜನರು ಹೋರಾಟಕ್ಕಿಳಿಯುತ್ತಾರೆ. ಉಪೇಂದ್ರ ಅವರನ್ನು ಬಂಧಿಸುವವರೆಗೂ ಪ್ರತಿಭಟನೆ ಮುಂದುವರೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.
ತಾಲೂಕು ನಾಗರೀಕ ಹಿತರಕ್ಷಣಾ ಸಮಿತಿ ಅಧ್ಯಕ್ಷ ನಟರಾಜು ಮಾಳಿಗೆ, ಆದಿ ದ್ರಾವಿಡ ಮೂಲನಿವಾಸಿಗಳ ಹೋ ರಾಟ ಸಮಿತಿಯ ಜೆ.ಲಿಂಗರಾಜು, ಚೇತನ್ ದೊರೈರಾಜ್, ಸುರೇಶ್, ದಿಲೀಪ್, ಸಿದ್ಧಾರ್ಥ, ಮುಳ್ಳೂರು ಮಂಜು, ಮಲ್ಲಿಕಾರ್ಜುನ, ಅಕ್ಮಲ್, ಇನಾಯತ್, ಮುಳ್ಳೂರು ಕಮಲ್, ಸಿದ್ದಪ್ಪಾಜಿ, ಬಸ್ತೀಪುರ ರವಿ ಇದ್ದರು. ============