ಸೋಮವಾರಪೇಟೆ: ತಾಲೂಕಿನ ತೋಳೂರುಶೆಟ್ಟಳ್ಳಿ ನಡ್ಲಕೊಪ್ಪ ಗುಂಪು ಸಮಿತಿಯ ವಾರ್ಷಿಕ ಸಭೆ ಇತ್ತೀಚೆಗೆ ನಡೆಯಿತು.
ಜಿಪಂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಎಂ.ಪಿ.ವೀರೇಂದ್ರ, ನಿವೃತ್ತ ಮುಖ್ಯ ಶಿಕ್ಷಕ ಹಾಗೂ ಲಯನ್ಸ್ ಕ್ಲಬ್ ಅಧ್ಯಕ್ಷ ಸಿ.ಕೆ. ಶಿವಕುಮಾರ್ ಅವರನ್ನು ಸನ್ಮಾನಿಸಲಾಯಿತು. ಸಮಿತಿ ಅಧ್ಯಕ್ಷ ಟಿ.ಕೆ. ಮಾಚಯ್ಯ ಅಧ್ಯಕ್ಷತೆ ವಹಿಸಿದ್ದರು. ಸಮಿತಿ ಕಾರ್ಯದರ್ಶಿ ವಿ.ವಿ.ಸೋಮಯ್ಯ, ಖಜಾಂಚಿ ಎಂ.ಕೆ.ಧರ್ಮಪ್ಪ, ಗ್ರಾಮದ ಮುಖಂಡರಾದ ಎಚ್.ಬಿ. ರಮೇಶ, ಸುಬ್ಬಯ್ಯ, ಶಾಂತಪ್ಪ, ನಿವೃತ್ತ ನೌಕರರ ಸಂಘದ ಅಧ್ಯಕ್ಷ ಸಿ.ಕೆ. ಮಲ್ಲಪ್ಪ ಮತ್ತಿತರರು ಇದ್ದರು.