ಚಿತ್ರದುರ್ಗ: ತಾಲೂಕಿನ ಪಂಡರಹಳ್ಳಿ ಗ್ರಾಮದಲ್ಲಿ ಇರುವ ಓಬಳನರಸಿಂಹ ಸ್ವಾಮಿಯ ದೇಗುಲದ 12ನೇ ವಾರ್ಷಿಕೋತ್ಸವವನ್ನು ಫೆ. 17ರಂದು ಹಮ್ಮಿಕೊಳ್ಳಲಾಗಿದೆ.
ವಾಲ್ಮೀಕಿ ಪ್ರಸನ್ನಾನಂದಪುರಿ ಶ್ರೀ, ಶಿವಲಿಂಗಾನಂದ ಶ್ರೀ ಸಾನಿಧ್ಯ ವಹಿಸಲಿದ್ದಾರೆ. ಬೆಳಗ್ಗೆ 7.30ರಿಂದ 9ರವರೆಗೂ ಹೋಮ, ಅಭಿಷೇಕ ಸೇರಿ ಇನ್ನಿತರೆ ಪೂಜಾ ಕೈಂಕರ್ಯ ಜರುಗಲಿವೆ. ನಂತರ ಮಹಾಮಂಗಳಾರತಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿದೆ. ಗಂಜೀಗಟ್ಟೆ ಆರ್.ಕೃಷ್ಣಮೂರ್ತಿ ತಂಡ ಭಕ್ತಿಗೀತೆ ಪ್ರಸ್ತುತ ಪಡಿಸಲಿದ್ದಾರೆ.
ಶಾಸಕರಾದ ಕೆ.ಸಿ.ವೀರೇಂದ್ರಪಪ್ಪಿ, ಟಿ.ರಘುಮೂರ್ತಿ, ವಾಲ್ಮೀಕಿ ಸಮುದಾಯದ ಮುಖಂಡರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪೂಜಾ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಪಂಡರಹಳ್ಳಿ ಗ್ರಾಮಸ್ಥರು ಕೋರಿದ್ದಾರೆ.