ಚಿಕ್ಕಬಳ್ಳಾಪುರ: ತಾಲೂಕಿನ ವಿವಿಧೆಡೆ ಗುರುವಾರ ಭೇಟಿ ನೀಡಿದ ಪಂಚಾಯತ್ ರಾಜ್ ಇಲಾಖೆ ಆಯುಕ್ತೆ ಪ್ರಿಯಾಂಕಾ ಮೇರಿ ್ರಾನ್ಸಿಸ್, ನರೇಗಾ ಸೇರಿ ಹಲವು ಯೋಜನೆಗಳಲ್ಲಿ ಕೈಗೊಂಡಿರುವ ಕಾಮಗಾರಿಗಳನ್ನು ಪರಿಶೀಲಿಸಿದರು.
ಮುದ್ದೇನಹಳ್ಳಿ ಸರ್ಕಾರಿ ಮಾದರಿ ಪ್ರೌಢಶಾಲೆ ಹಾಗೂ ದೇವಸ್ಥಾನದ ಹೊಸಹಳ್ಳಿಯ ಅಂಗನವಾಡಿ ಕೇಂದ್ರ, ಆಟದ ಮೈದಾನ, ಉದ್ಯಾನ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿ, ಮಾಹಿತಿ ಪಡೆದುಕೊಂಡರು.
ಬಳಿಕ ಅಗಲಗುರ್ಕಿ ಗ್ರಾಪಂ ಕಚೇರಿಗೆ ಭೇಟಿ ನೀಡಿ, ಕರೊನಾ ತುರ್ತು ಸಂದರ್ಭದಲ್ಲಿ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಅನುಷ್ಠಾನ, ಸಹಾಯವಾಣಿ ಕೇಂದ್ರದ ಕಾರ್ಯ ವೀಕ್ಷಿಸಿದರು. ನರೇಗಾದಲ್ಲಿ ಜಿಲ್ಲೆಯಾದ್ಯಂತ ಮಳೆಕೊಯ್ಲು ಮತ್ತು ನೀರು ಸಂರಕ್ಷಣೆ, ಆರೋಗ್ಯ, ಶೈಕ್ಷಣಿಕ ಅಭಿವೃದ್ಧಿಗೆ ಪೂರಕ ಕೆಲಸಗಳನ್ನು ಉತ್ತಮವಾಗಿ ಕೈಗೊಳ್ಳಲಾಗಿದೆ ಎಂದು ಪ್ರಿಯಾಂಕಾ ಮೇರಿ ಮೆಚ್ಚುಗೆ ವ್ಯಕ್ತಪಡಿಸಿದರು.
ಉದ್ಯೋಗ ಖಾತ್ರಿ ಯೋಜನೆ ಅನುಷ್ಠಾನ, ಅರಿವು ಮತ್ತು ಅನುದಾನ ಸದ್ಬಳಕೆಗೆ ಸಂಬಂಧಿಸಿದಂತೆ ಎಲ್ಲ ಗ್ರಾಪಂಗಳಲ್ಲಿ ವಿಶೇಷ ಅಭಿಯಾನ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ನೀರಿನ ಸಂರಕ್ಷಣೆ, ಕಾರ್ಮಿಕರಿಗೆ ಉದ್ಯೋಗ, ಆರೋಗ್ಯ ಹಾಗೂ ಶೈಕ್ಷಣಿಕ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಲಾಗಿದೆ ಎಂದು ಜಿಪಂ ಸಿಇಒ ಬಿ.ಫೌಜೀಯಾ ತರನ್ನುಮ್ ವಿವರಿಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಸ್.ಜಿ.ನಾಗೇಶ್, ತಾಪಂ ಇಒ ಬಿ.ಎಲ್.ಹರ್ಷವರ್ಧನ್ ಮತ್ತಿತರರು ಇದ್ದರು.
ಪುರದಲ್ಲೂ ಪರಿಶೀಲನೆ: ಗೌರಿಬಿದನೂರು ತಾಲೂಕಿನ ಪುರ ಗ್ರಾಪಂನಲ್ಲಿನ ಗ್ರಾಮ ಆರೋಗ್ಯ ಸೇವಾಕೇಂದ್ರ ಹಾಗೂ ಗ್ರಂಥಾಲಯಕ್ಕೆ ಆಯುಕ್ಕೆ ಪ್ರೀಯಾಂಕ ಮೇರಿ ್ರಾನ್ಸಿಸ್ ಭೇಟಿ ನೀಡಿದರು. ಜನರಿಗೆ ಗುಣಮಟ್ಟದ ಸೇವೆ ಒದಗಿಸಬೇಕು. ಯಾವುದೇ ಕಾರಣಕ್ಕೂ ಅನವಶ್ಯಕವಾಗಿ ಅಲೆದಾಡಿಸಬಾರದು ಎಂದು ಸಲಹೆ ನೀಡಿದರು.