ಬಾಗಲಕೋಟೆ: ಬೆನಕಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ತಾಲೂಕಿನ ಮನ್ನಿಕಟ್ಟಿ ಗ್ರಾಮದ ಅಮೃತ ಸರೋವರದಡದಲ್ಲಿ ಶುಕ್ರವಾರ ನರೇಗೋತ್ಸವ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಽಕಾರಿ ಶಶಿಧರ ಕುರೇರ ಮಾತನಾಡಿ, ಕೂಲಿ ಕಾರ್ಮಿಕರಿಗೆ ನರೇಗಾ ಯೋಜನೆ ಕುರಿತು ಮಾಹಿತಿ ನೀಡಿದರು, ಈ ಸಂದರ್ಭದಲ್ಲಿ ಕೂಲಿ ಕಾರ್ಮಿಕರಿಗೆ ಆರೋಗ್ಯ ತಪಾಸಣಾ ಶಿಬಿರ ಸಹ ಜರುಗಿತು. ಹಾಗೂ ನರೇಗಾ ಯೋಜನೆಯಡಿಯಲ್ಲಿ ನೂರು ದಿನಗಳಲ್ಲಿ ಕೂಲಿ ನಿರ್ವಹಿಸಿದ ಕೂಲಿ ಕಾರ್ಮಿಕರಿಗೆ ಪ್ರಮಾಣ ಪತ್ರ ನೀಡಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಬೆನಕಟ್ಟಿ ಗ್ರಾಮ ಪಂಚಾಯತ ಅಧ್ಯಕ್ಷೆ ಬಾಲವ್ವ ಮಾದರ, ಸದಸ್ಯರಾದ ಹನಮಂತ ಪಲ್ಲೇದ, ಮುತ್ತಪ್ಪ ಹುನಸಿಕಟ್ಟಿ, ಮಲ್ಲಮ್ಮ ಜುಮನಾಳ, ಪಾರ್ವತೆವ್ವ ಮಾದರ, ತಾ.ಪಂ ಕಾರ್ಯನಿರ್ವಾಹಕ ಅಽಕಾರಿ ಎಸ್.ಎಂ.ರೇವಡಿ, ಸಹಾಯಕ ನಿರ್ದೇಶಕ ನವೀನ ಅರಳಿಮಟ್ಟಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಽಕಾರಿ ಜ್ಯೋತಿ ಪಾಟೀಲ ಸೇರಿದಂತೆ ಇತರರು ಉಪಸ್ಥಿತರಿದ್ದರು.