ಜಿಲ್ಲೆ

ನರ್ಸಿಂಗ್ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಪತ್ರ ಪ್ರದಾನ

ಎ.ಎಸ್.ಮಣಿಕಂಠ

ಚಾಮರಾಜನಗರ: ಚಾ.ನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಬೋಧನಾ ಆಸ್ಪತ್ರೆ ಮತ್ತು ಸಿಮ್ಸ್ ನರ್ಸಿಂಗ್ ಕಾಲೇಜು ವತಿಯಿಂದ 2020-21 ನೇ ಸಾಲಿನ ಬಿಎಸ್ಸಿ ನರ್ಸಿಂಗ್ ವಿಧ್ಯಾರ್ಥಿಗಳಿಗೆ ಪದವಿ ಪ್ರಮಾಣ ಪತ್ರ ಪ್ರದಾನ ಮಾಡಲಾಯಿತು.

ನಗರದ ಹೊರವಲಯದಲ್ಲಿರುವ ಸಿಮ್ಸ್ ನರ್ಸಿಂಗ್ ಕಾಲೇಜಿನ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಪದವಿ ಪ್ರಧಾನ ಮತ್ತು ವಚನ ಸ್ವೀಕಾರ ಸಮಾರಂಭದಲ್ಲಿ ಹಾಸನದ ಸರ್ಕಾರಿ ಶುಶ್ರೂಷ ಮಹಾವಿದ್ಯಾಲಯದ ಪ್ರಾಶುಪಾಲೆ ಸಿ.ಟಿ.ರತ್ನಮ್ಮ ಪ್ರಮಾಣ ಪತ್ರ ವಿತರಿಸಿದರು. ಈ ಸಂದರ್ಭದಲ್ಲಿ ಅವರು ಮಾತನಾಡಿ, ನರ್ಸಿಂಗ್ ಪದವಿ ಮುಗಿಸಿ ಮುಂದಿನ ಹಂತಕ್ಕೆ ತೆರಳುತ್ತಿರುವ ವಿದ್ಯಾರ್ಥಿಗಳ ಭವಿಷ್ಯ ಸುಗಮವಾಗಲೆಂದು ಹಾರೈಸಿದರು.

ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಭೋಧನಾ ಆಸ್ಪತ್ರೆಯ ಡೀನ್ ಹಾಗೂ ನಿರ್ದೇಶಕ ಡಾ.ಎಚ್. ಜಿ.ಮಂಜುನಾಥ್ ಮಾತನಾಡಿ, ವಿದ್ಯಾರ್ಥಿ ಜೀವನವನ್ನು ಪೂರ್ಣಗೊಳಿಸಿದ ನಿಮಗೆ ಇನ್ನು ಮುಂದೆ ವೃತ್ತಿ ಜೀವನವು ಆರಂಭವಾಗಲಿದೆ. ರೋಗಿಗಳಿಗೆ ಉತ್ತಮ ಸೇವೆಯನ್ನು ನೀಡಿ ಒಳ್ಳೆಯ ಹೆಸರು ಪಡೆಯಿರಿ ಎಂದು ಶುಭ ಕೋರಿದರು.

ಗಡಿಭಾಗದ ಚಾಮರಾಜನಗರ ಜಿಲ್ಲೆಯ ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ 67 ವಿದ್ಯಾರ್ಥಿಗಳು ಪದವೀಧರರಾಗಿ ಹೊರಬರುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಭೋಧನಾ ಆಸ್ಪತ್ರೆಯ ಜಿಲ್ಲಾ ಶಸ್ತ್ರ ಚಿಕಿತ್ಸಕರು ಹಾಗೂ ವೈದ್ಯಕೀಯ ಅಧೀಕ್ಷಕ ಡಾ.ಕೆ.ಆರ್.ಮಹೇಶ್, ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ.ಗಿರೀಶ್ ವಿ.ಪಾಟೀಲ್, ನರ್ಸಿಂಗ್ ಕಾಲೇಜು ಪ್ರಾಂಶುಪಾಲರಾದ ಎನ್.ನಮ್ರತಾ, ಶುಶ್ರೂಷ ಅಧೀಕ್ಷರಾದ ಗೀತಾ ಉಪಸ್ಥಿತರಿದ್ದರು.