ಚಿಕ್ಕಮಗಳೂರಿನ ಆಶ್ರಯ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲವಾಗಲು ನಗರದ ಪಾರ್ವತಿಪುರದ ಆಶ್ರಯ ನರ್ಸಿಂಗ್ ಕಾಲೇಜು ಸಮೀಪದಲ್ಲಿ ಕೆಎಸ್‌ಆರ್‌ಟಿಸಿ ಬಸ್ ನಿಲುಗಡೆಗೆ ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನAದ ಸ್ವಾಮಿ ಹಸಿರುನಿಶಾನೆ ತೋರಿದರು. ಡಾ.ಡಿ.ಎಲ್.ವಿಜಯಕುಮಾರ್, ಜಗದೀಶ್, ಪುರುಷೋತ್ತಮ್ ಮತ್ತಿತರರಿದ್ದರು. 
ಜಿಲ್ಲೆ

ನರ್ಸಿಂಗ್ ವಿದ್ಯಾರ್ಥಿಗಳಿಗೆ ಬಸ್ ನಿಲುಗಡೆಗೆ ಚಾಲನೆ

ಚಿಕ್ಕಮಗಳೂರು: ಗ್ರಾಮೀಣ ಪ್ರದೇಶದ ನರ್ಸಿಂಗ್ ವಿದ್ಯಾರ್ಥಿಗಳಿಗೆ ಅನುಕೂಲವಾಗಲು ನಗರದ ಪಾರ್ವತಿಪುರದ ಆಶ್ರಯ ನರ್ಸಿಂಗ್ ಕಾಲೇಜು ಸಮೀಪದಲ್ಲಿ ಕೆಎಸ್‌ಆರ್‌ಟಿಸಿ ಬಸ್ ನಿಲುಗಡೆಗೆ ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನAದಸ್ವಾಮಿ ಹಸಿರು ನಿಶಾನೆ ತೋರಿದರು.

ಈ ವೇಳೆ ಮಾತನಾಡಿದ ಎಂ.ಸಿ.ಶಿವಾನAದ ಸ್ವಾಮಿ, ಗ್ರಾಮಾಂತರ ಪ್ರದೇಶ ಸೇರಿದಂತೆ ವಿವಿಧೆಡೆಯಿಂದ ಆಗಮಿಸುವ ಸುಮಾರು ೪೦೦ಕ್ಕೂ ಹೆಚ್ಚು ನರ್ಸಿಂಗ್ ವಿದ್ಯಾರ್ಥಿಗಳು ರಾಂಪುರ ಗ್ರಾಮದಲ್ಲಿ ಬಸ್ ಇಳಿದು ನಡೆದುಕೊಂಡು ಕಾಲೇಜಿಗೆ ಬರಬೇಕಾಗಿತ್ತು. ಇದನ್ನರಿತು ಕಾಲೇಜಿನ ಅಧ್ಯಕ್ಷರು ಕಾಲೇಜು ಸಮೀಪವೇ ಬಸ್ ನಿಲುಗಡೆಗೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಅಧಿಕಾರಿಗಳ ಗಮನಕ್ಕೆ ವಿಷಯವನ್ನು ತಂದು ಮಕ್ಕಳ ಶೈಕ್ಷಣಿಕ ಉz್ದೆÃಶಕ್ಕೆ ಅನುಕೂಲವಾಗುವಂತೆ ಕಾಲೇಜು ಬಳಿಯೇ ಬಸ್ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ ಎಂದರು.

ನಗರ ಸೇರಿದಂತೆ ಗ್ರಾಮೀಣ ಭಾಗದಿಂದ ಬರುವ ವಿದ್ಯಾರ್ಥಿಗಳು ರಾಂಪುರ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಕಾಲೇಜಿನವರೆಗೆ ನಡೆದುಕೊಂಡೇ ಬರಬೇಕಾಗಿತ್ತು. ಹೀಗಾಗಿ ಇದೀಗ ಕಾಲೇಜು ಬಳಿಯೇ ಬಸ್ ನಿಲುಗಡೆಗೆ ಅವಕಾಶವಾಗಿರುವುದರಿಂದ ವಿದ್ಯಾರ್ಥಿಗಳ ಸಮಯ ಉಳಿತಾಯವಾದಂತಾಗಿದೆ. ಇದರ ಸದುಪಯೋಗವನ್ನು ಪ್ರತಿಯೊಬ್ಬ ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದು ಹೇಳಿದರು.

ಕೆಎಸ್‌ಆರ್‌ಟಿಸಿ ಅಧಿಕಾರಿ ಜಗದೀಶ್ ಮಾತನಾಡಿ, ಮಕ್ಕಳ ಉಜ್ವಲ ಭವಿಷ್ಯ ಹಾಗೂ ವಿದ್ಯಾಭ್ಯಾಸಕ್ಕೆ ಅಡೆತಡೆಯಾಗದಂತೆ ಸೂಕ್ತ ಸಮಯಕ್ಕೆ ಕಾಲೇಜಿಗೆ ತೆರಳಲು ಕಾಲೇಜಿನ ಮನವಿ ಮೇರೆಗೆ ಬಸ್ ನಿಲುಗಡೆ ಸೌಲಭ್ಯ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ತಾಲೂಕು ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಎಂ.ಮಲ್ಲೇಶ್, ಆಶ್ರಯ ನರ್ಸಿಂಗ್ ಕಾಲೇಜಿನ ಅಧ್ಯಕ್ಷ ಡಾ.ಡಿ.ಎಲ್.ವಿಜಯ್‌ಕುಮಾರ್, ಸಂಸ್ಥೆಯ ಆಡಳಿತಾಧಿಕಾರಿ ಜಿ.ಪುರುಷೋತ್ತಮ್, ಕಾಲೇಜಿನ ಪ್ರಾಚಾರ್ಯರು, ಉಪನ್ಯಾಸಕರು, ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಕೆಎಸ್‌ಆರ್‌ಟಿಸಿ ಸಿಬ್ಬಂದಿ ಉಪಸ್ಥಿತರಿದ್ದರು.