ಕಲಬುರಗಿ: ಮನೆಗೆ ನಲ್ಲಿ ನೀರಿನ ಸಂಪರ್ಕ ಕೊಡಿಸಲು ೧೦ ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಜೇವರ್ಗಿ ಪುರಸಭೆ ಎಸ್‌ಡಿಎ ಅಧಿಕಾರಿ ಮೇಲೆ ಬುಧವಾರ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ, ಬಲೆಗೆ ಹಾಕಿದ್ದಾರೆ. ಜೇವರ್ಗಿ ಪುರಸಭೆಯ ಎಸ್‌ಡಿಎ ಅಧಿಕಾರಿ ಶಾಹೀನ್ ಲೋಕಾ ಬಲೆಗೆ ಬಿದ್ದ ಅಧಿಕಾರಿ.
ಜೇವರ್ಗಿ ನಿವಾಸಿ ಅಬ್ದುಲ್ ಪಟೇಲ್ ರೆಹೆಮಾನ್ ಅವರ ಮನೆಗೆ ನಲ್ಲಿ ನೀರಿನ ಸಂಪರ್ಕಕ್ಕೆ ಅನುಮತಿ ನೀಡಲು ಮನವಿ ಸಲ್ಲಿಸಿದ್ದು, ಅದಕ್ಕೆ ೧೦ ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಈ ಕುರಿತು ಅಬ್ದುಲ್ ಪಟೇಲ್ ಲೋಕಾ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಬುಧವಾರ ೧೦ ಸಾವಿರ ರೂ.ವನ್ನು ಪಡೆಯುವ ವೇಳೆ ದಾಳಿ ಮಾಡಿದ ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಬಲೆಗೆ ಬೀಸಿದ್ದಾರೆ. ಲೋಕಾಯುಕ್ತ ಡಿವೈಎಸ್ಪಿ ಗೀತಾ ಬೇನಾಳ ನೇತೃತ್ವದಲ್ಲಿ ದಾಳಿ ನಡೆದಿದ್ದು, ಇನ್ಸ್ಸ್ಪೆಕ್ಟರ್ ಅಕ್ಕಮಹಾದೇವಿ ಸಿಬ್ಬಂದಿ ಇದ್ದರು.