ಜಿಲ್ಲೆ

ನವನಗರದಲ್ಲಿ ಪೋಷಣ ಅಭಿಯಾನ

Dharwada - Basavaraj Idli

ಹುಬ್ಬಳ್ಳಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ನವನಗರದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸಂಯುಕ್ತಾಶ್ರಯದಲ್ಲಿ ಶನಿವಾರ ರಾಷ್ಟ್ರೀಯ ಪೋಷಣ ಅಭಿಯಾನ ಅಂಗವಾಗಿ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಗರ್ಭಿಣಿಯರ ಆಹಾರ ಹಾಗೂ ಸಿರಿಧಾನ್ಯಗಳು ಮತ್ತು ಪೌಷ್ಟಿಕ ಆಹಾರದ ಮಹತ್ವ, ಪರಂಪರೆ ಬಗ್ಗೆ ಮಾಹಿತಿ ನೀಡಲಾಯಿತು.

ಸಜ್ಜೆ ರೊಟ್ಟಿ, ರಾಗಿ ರೊಟ್ಟಿ, ಶೇಂಗಾ ಹೋಳಿಗೆ, ಬೆಲ್ಲದ ಉಂಡಿ ಮುಂತಾದ ಆಹಾರಗಳನ್ನು ಪ್ರದರ್ಶಿಸಲಾಯಿತು. ಗರ್ಭಿಣಿಯರಿಗೆ ಉಡಿ ತುಂಬುವ ಸಂಪ್ರದಾಯ ನೆರವೇರಿಸಲಾಯಿತು.

ಪಾಲಿಕೆ ಸದಸ್ಯೆ ಸುನಿತಾ ಮಾಳವದಕರ ಕಾರ್ಯಕ್ರಮ ಉದ್ಘಾಟಿಸಿದರು. ಜಿಲ್ಲಾ ಆರೋಗ್ಯ ಮೇಲ್ವಿಚಾರಕರಾದ ಎ.ಎಸ್. ಮಜ್ಜಗಿ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಮಿತ್ ಭಟ್, ಅಂಗನವಾಡಿ ಮೇಲ್ವಿಚಾರಕಿ ದೀಪಿಕಾ ಪೋಳ, ರೇಖಾ ಬಾಡಗಿ, ಆರೋಗ್ಯ ಸಂರಕ್ಷಣಾಧಿಕಾರಿಗಳಾದ ಶ್ವೇತಾ ಪಾಟೀಲ, ಪ್ರಮೀಳಾ, ಗೀತಾ, ರಾಜೇಶ್ವರಿ, ಆಶಾ ಕಾರ್ಯಕರ್ತೆಯರು, ಭಾಗವಹಿಸಿದ್ದರು.