ವಿಜಯಪುರ ನಗರದ ನವಭಾಗದಲ್ಲಿ ರಸ್ತೆ ಬದಿ ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದ ಅಂಗಡಿ, ಮನೆಗೋಡೆಯನ್ನು ಮಹಾನಗರ ಪಾಲಿಕೆ ಆಯುಕ್ತ ಸೌದಾಗರ ನೇತೃತ್ವದ ತಂಡ ಜೆಸಿಬಿ ಮೂಲಕ ತೆರವುಗೊಳಿಸಿದರು. 
ಜಿಲ್ಲೆ

ನವಭಾಗ ರಸ್ತೆಯಲ್ಲಿ ಅತಿಕ್ರಮಣ ತೆರವು

ವಿಜಯಪುರ: ನಗರದ ನವಭಾಗ ರಸ್ತೆಯಲ್ಲಿ ಅಕ್ರಮ ಒತ್ತುವರಿ ಮಾಡಿಕೊಂಡಿದ್ದವರಿಗೆ ಮಹಾನಗರ ಪಾಲಿಕೆ ಸಿಬ್ಬಂದಿ ಜೆಸಿಬಿ ಮೂಲಕ ತೆರವುಗೊಳಿಸುವ ಮೂಲಕ ಬಿಸಿಮುಟ್ಟಿಸಿದರು.

ನವಭಾಗ ರಸ್ತೆಯಲ್ಲಿ ರಸ್ತೆ ಅಭಿವೃದ್ಧಿ ಕಾರ್ಯಕ್ಕೆ ಒತ್ತುವರಿ ಅಡ್ಡಿಯಾಗಿತ್ತು. ಈ ಹಿನ್ನೆಲೆ ಮಹಾನಗರ ಪಾಲಿಕೆ ಆಯುಕ್ತ ಸೌದಾಗರ್ ನೇತೃತ್ವದಲ್ಲಿ ಆಗಮಿಸಿದ ಪಾಲಿಕೆ ಸಿಬ್ಬಂದಿ ಅಕ್ರಮವಾಗಿ ನಿರ್ಮಿಸಿದ್ದ ಅಂಗಡಿ, ಮನೆ ಗೋಡೆಗಳನ್ನು ತೆರವುಗೊಳಿಸಿದರು.

ಆರಂಭದಲ್ಲಿ ಅಕ್ರಮ ತೆರವಿಗೆ ತೀವ್ರ ವಿರೋಧ ವ್ಯಕ್ತವಾಯಿತಾದರೂ ಅದಕ್ಕೆ ಜಗ್ಗದ ಅಧಿಕಾರಿಗಳು ಪೊಲೀಸ್ ಭದ್ರತೆಯನ್ನು ಅಕ್ರಮ ಒತ್ತುವರಿಯನ್ನು ಸಂಪೂರ್ಣವಾಗಿ ತೆರವುಗೊಳಿಸಿದರು.

ಗಾಂಧಿ ಚೌಕ್ ಪೊಲೀಸರು ನವಭಾಗ ಪ್ರದೇಶದಲ್ಲಿ ಭದ್ರತೆ ಒದಗಿಸಿ, ಯಾವುದೇ ಅಹಿತರ ಘಟನೆ ನಡೆಯದಂತೆ ನೋಡಿಕೊಂಡರು.