ಜಿಲ್ಲೆ

ನವೀನ್, ಬಸವರಾಜು ಪ.ಪಂ.ಗೆ ನಾಮನಿರ್ದೇಶನ

ಹನೂರು: ಪಟ್ಟಣದ ಎನ್.ನವೀನ್ ಹಾಗೂ ಎಂ.ಬಸವರಾಜು ಅವರನ್ನು ಪಟ್ಟಣ ಪಂಚಾಯಿತಿ ನಾಮ ನಿರ್ದೇಶಿತ ಸದಸ್ಯರಾಗಿ ಆಯ್ಕೆ ಮಾಡಿ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಟಿ. ಮಂಜುನಾಥ ಇತ್ತೀಚೆಗೆ ಆದೇಶ ಹೊರಡಿಸಿದ್ದಾರೆ.

ಕರ್ನಾಟಕ ಪೌರಸಭೆಗಳ ಅಧಿನಿಯಮ 1964ರ ಪ್ರಕರಣ 352 (1)(ಬಿ) ರ ಅಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈ ಇಬ್ಬರು ಅಭ್ಯರ್ಥಿಗಳನ್ನು ತಕ್ಷಣ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಪಟ್ಟಣ ಪಂಚಾಯಿತಿಗೆ ಸದಸ್ಯರನ್ನಾಗಿ ಸರ್ಕಾರವು ನಾಮ ನಿರ್ದೇಶನ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.