ಜಿಲ್ಲೆ

ನಾ.ಡಿಸೋಜಾ ದತ್ತಿ ನಿಧಿ ಕಾರ್ಯಕ್ರಮ ಇಂದು

ವಿರಾಜಪೇಟೆ: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ವಿರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಂಯುಕ್ತ ಆಶ್ರಯದಲ್ಲಿ ನಾ.ಡಿಸೋಜಾ ದತ್ತಿ ನಿಧಿ ಕಾರ್ಯಕ್ರಮವನ್ನು ಮಾ.20ರಂದು ಬೆಳಗ್ಗೆ 10 ಗಂಟೆಗೆ ವಿರಾಜಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಪಿ.ಕೇಶವಕಾಮತ್ ವಹಿಸಲಿದ್ದು, ಪ್ರಾಸ್ತಾವಿಕ ನುಡಿಯನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಲಿದ್ದಾರೆ.

ಉದ್ಘಾಟನೆಯನ್ನು ವಿರಾಜಪೇಟೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಕೆ.ಸಿ.ದಯಾನಂದ ನೆರವೇರಿಸಲಿದ್ದಾರೆ. ದತ್ತಿ ಉಪನ್ಯಾಸವನ್ನು ಗಾಳಿಬೀಡು ನವೋದಯ ವಿದ್ಯಾಲಯದ ಉಪನ್ಯಾಸಕ, ಸಾಹಿತಿ ಮಾರುತಿ ದಾಸಣ್ಣನವರ್ ಮಾಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ವಿರಾಜಪೇಟೆ ಉಪ ವಿಭಾಗದ ಪೊಲೀಸ್ ಉಪ ಅಧೀಕ್ಷಕ ಎಸ್.ಮಹೇಶ್ ಕುಮಾರ್, ವಿರಾಜಪೇಟೆ ತಾಲೂಕು ಕಸಾಪ ಅಧ್ಯಕ್ಷ ಡಿ.ಪಿ.ರಾಜೇಶ್ ಪಾಲ್ಗೊಳ್ಳಲಿದ್ದಾರೆ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಎಸ್.ಐ.ಮುನಿರ್ ಅಹಮದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.