ಚಿತ್ರದುರ್ಗ: ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಬುಧವಾರ ರಾತ್ರಿ ಗಣೇಶ ವಿಸರ್ಜನೆ ವೇಳೆ ನಡೆದ ಕಲ್ಲು ತೂರಾಟ ಘಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಖಂಡಿಸಿದ್ದಾರೆ. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಈಗಾಗಲೇ ಹಲವು ದುಷ್ಕರ್ಮಿಗಳ ಬಂಧನವಾಗಿದ್ದು, ಪರಿಸ್ಥಿತಿ ಹತೋಟಿಯಲ್ಲಿದೆ ಎಂದು ತಿಳಿಸಿದರು. ನಮ್ಮ ಸರ್ಕಾರ ಎಲ್ಲ ವರ್ಗಗಳ ಜನರಿಗೂ ರಕ್ಷಣೆ ಒದಗಿಸುವ ಕೆಲಸವನ್ನು ಮಾಡಿಕೊಂಡು ಬಂದಿದೆ ಎಂದು ಸಂಸದ ತೇಜಸ್ವಿ ಸೂರ‌್ಯ ಹೇಳಿಕೆಯನ್ನು ಅಲ್ಲಗಳೆದರು.