ಕೊಡಗು ಸುನ್ನೀ ವೆಲ್ಫೇರ್ ಅಸೋಸಿಯೇಷನ್ ಯುಎಇ ಸಮಿತಿ ಆಶ್ರಯದಲ್ಲಿ ನಾಪೋಕ್ಲು ಸಮೀಪದ ಚೆರಿಯಪರಂಬು ಶಾದಿಮಹಲ್ ಸಭಾಂಗಣದಲ್ಲಿ ಉಚಿತ ಸಾಮೂಹಿಕ ವಿವಾಹವನ್ನು ಧರ್ಮ ಗುರುಗಳು ನೆರವೇರಿಸಿದರು. 
ಜಿಲ್ಲೆ

ನಾಪೋಕ್ಲುವಿನಲ್ಲಿ ಸಾಮೂಹಿಕ ವಿವಾಹ

ನಾಪೋಕ್ಲು: ಕೊಡಗು ಸುನ್ನೀ ವೆಲ್ಫೇರ್ ಅಸೋಸಿಯೇಷನ್ ಯುಎಇ ಸಮಿತಿ ಆಶ್ರಯದಲ್ಲಿ ಗುರುವಾರ ನಾಪೋಕ್ಲು ಸಮೀಪದ ಚೆರಿಯಪರಂಬು ಶಾದಿಮಹಲ್ ಸಭಾಂಗಣದಲ್ಲಿ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಿತು.
ಸಮಿತಿಯು ಮೂರು ವರ್ಷಗಳಿಂದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಹಮ್ಮಿಕೊಂಡು ಬರುತ್ತಿದ್ದು ಈ ಬಾರಿ ನಡೆದ 4 ಬಡವರ್ಗದ ಜೋಡಿಗಳು ನೂತನ ಬಾಳಿಗೆ ಕಾಲಿಟ್ಟರು. ವಧು-ವರರಿಗೆ ಬೇಕಾದ ಮಾಂಗಲ್ಯ, ಚಿನ್ನಾಭರಣ, ವಸ್ತ್ರ, ವಾಚ್ ನೀಡಲಾಯಿತು.
ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷ ಮೌಲಾನ ಶಾಫಿ ಸಅದಿ ಮುಖ್ಯ ಅತಿಥಿಗಳಾಗಿ ಆಗಮಿಸಿ ನೂತನ ವಧುವರರನ್ನು ಆಶೀರ್ವದಿಸಿದರು. ನಿಖಾಹ್ ಮುಂದಾಳತ್ವವನ್ನು ಸಯ್ಯದ್ ಮುಸ್ತಫಾ ಪೂಕೊಯ ತಂಘಳ್, ಕೊಡಗು ಜಿಲ್ಲಾ ನಾಇಬ್ ಖಾಝಿ ಶಾದುಲಿ ಫೈಝಿ, ಕೂರ್ಗ್ ಜಂಇಯತ್ತುಲ್ ಉಲಮಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಅಹ್ಸನಿ, ಕುಂಜಿಲ ಮುದರ್ರಿಸ್ ನಿಝಾರ್ ಅಹ್ಸನಿ ಕಕ್ಕಡಿಪುರಂ ವಹಿಸಿದ್ದರು.

ಜಿಲ್ಲೆಯ ಖಾಝಿಗಳಾದ ಎಂ.ಎಂ. ಅಬ್ದುಲ್ಲಾ ಫೈಝಿ ಎಡಪಾಲ ಹಾಗೂ ಶಾದುಲಿ ಫೈಝಿ ಉಸ್ತಾದ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕೊಡಗು ಜಿಲ್ಲಾ ವಕ್ಫ್ ಬೋರ್ಡ್ ಉಪಾಧ್ಯಕ್ಷ ಶಾಫಿ ಸಅದಿ, ಜಿಪಂ ಮಾಜಿ ಉಪಾಧ್ಯಕ್ಷ ಖಾಸಿಂ, ಕೂರ್ಗ್ ಜಂಇಯತುಲ್ ಉಲಮಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಅಹ್ಸನಿ ಅನ್ವಾರುಲ್ ಹುದಾ, ವಿರಾಜಪೇಟೆ ವಕ್ಫ್ ಬೋರ್ಡ್ ಮಾಜಿ ಅಧ್ಯಕ್ಷ ಅಬ್ದುಲ್ ರೆಹಮಾನ್, ಎಸ್‌ವೈಎಸ್ ರಾಜ್ಯಾಧ್ಯಕ್ಷ ಹಫೀಲ್ ಸಅದಿ ಇತರರು ಇದ್ದರು.

26-ಎನ್ ಪಿ ಕೆ-1
ಕೊಡಗು ಸುನ್ನೀ ವೆಲ್ಫೇರ್ ಅಸೋಸಿಯೇಷನ್ ಯುಎಇ ಸಮಿತಿ ಆಶ್ರಯದಲ್ಲಿ ನಾಪೋಕ್ಲು ಸಮೀಪದ ಚೆರಿಯಪರಂಬು ಶಾದಿಮಹಲ್ ಸಭಾಂಗಣದಲ್ಲಿ ಉಚಿತ ಸಾಮೂಹಿಕ ವಿವಾಹವನ್ನು ಧರ್ಮ ಗುರುಗಳು ನೆರವೇರಿಸಿದರು.